Homeರಾಜ್ಯ2027ರಲ್ಲೇ ವಿಧಾನಸಭೆ ಚುನಾವಣೆ ಸಾಧ್ಯತೆ : ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ

2027ರಲ್ಲೇ ವಿಧಾನಸಭೆ ಚುನಾವಣೆ ಸಾಧ್ಯತೆ : ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ

ಹಾಸನ,ಅ.19- ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌‍ ಸರ್ಕಾರದ ನಡವಳಿಕೆ ಹಾಗೂ ಪ್ರಸ್ತುತ ಬೆಳವಣಿಗೆಗಳನ್ನು ಗಮನಿಸಿದರೆ, 2028ರ ಬದಲಿಗೆ 2027ರಲ್ಲೇ ವಿಧಾನಸಭೆ ಚುನಾವಣೆ ನಡೆಯುವ ಪರಿಸ್ಥಿತಿ ನಿರ್ಮಾಣವಾಗಬಹುದು. ಜೆಡಿಎಸ್‌‍-ಬಿಜೆಪಿ ಸಮಿಶ್ರ ಸರ್ಕಾರ ರಚನೆಯಾಗಲಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌‍ ಮತ್ತು ಬಿಜೆಪಿ ಒಗ್ಗೂಡಿ ಸಮಿಶ್ರ ಸರ್ಕಾರ ರಚಿಸಲಿವೆ ಎಂಬ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆಗಳು ಹಾಗೂ ಸರ್ಕಾರ ನಡೆಸುತ್ತಿರುವವರ ಮನೋಭಾವವನ್ನು ಗಮನಿಸಿಯೇ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಅವರ ಹೇಳಿಕೆ ಸಹಜವಾದುದು. ಅದರಲ್ಲಿ ಯಾವುದೇ ಅತಿಶಯೋಕ್ತಿ ಇಲ್ಲ ಎಂದರು.

ರಾಜ್ಯ ಸರ್ಕಾರ ಸಾಗುತ್ತಿರುವ ಹಾದಿಯನ್ನು ಗಮನಿಸಿದರೆ, ಮುಂದಿನ ವರ್ಷವೇ ಈ ಸರ್ಕಾರ ಅಂತ್ಯವಾಗಬಹುದು. ಸರ್ಕಾರದ ನಡವಳಿಕೆಯಿಂದ ಬೇಸತ್ತ ಜನರೇ ಅದನ್ನು ಅಧಿಕಾರದಿಂದ ಕೆಳಗಿಳಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದರು. ತಮ ಹೇಳಿಕೆಗಳಲ್ಲಿ ಸತ್ಯವಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ್‌ ಪ್ರತಿಕ್ರಿಯೆ ಕುರಿತು ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳೇ ಸರ್ಕಾರದ ಪತನಕ್ಕೆ ಕಾರಣವಾಗಬಹುದು ಎಂದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ರಕ್ತ ಕುದಿಯುತ್ತಿದ್ದರೆ ಇಂಗ್ಲಿಷ್‌ನಲ್ಲಿ ಮಾತನಾಡುತ್ತಿದ್ದೆ ಎಂಬ ಗೃಹಸಚಿವ ಪ್ರಿಯಾಂಕ್‌ ಖರ್ಗೆ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ. ಇಂಗ್ಲಿಷ್‌ ಬರುವುದಿಲ್ಲವೆಂದಾದರೆ ಉರ್ದು ಚಾನೆಲ್‌ಗೆ ಹೋಗಿ ಮಾತನಾಡಲು ಹೇಳಿ ಎಂದು ತಿರುಗೇಟು ನೀಡಿದರು.

RELATED ARTICLES
spot_img

Latest News