Friday, January 2, 2026
Homeರಾಜ್ಯಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

Prime Minister Modi to visit Sri Kshetra Adichunchanagiri on Feb. 23

ಬೆೆಂಗಳೂರು,ಜ.2- ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ. ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ ಮೋದಿ ಅವರು ಫೆ.23ಕ್ಕೆ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಲಿದ್ದಾರೆ.

ಕಳೆದ ನವೆಂಬರ್‌ ತಿಂಗಳಿನಲ್ಲಿ ಉಡುಪಿಗೆ ಬಂದ ಬೆನ್ನಲ್ಲೇ ಇದೀಗ ಮೋದಿ ಅವರು, ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿಗೆ ಭೇಟಿ ನೀಡುತ್ತಿದ್ದು, ನಿರ್ಮಾಲನಂದನಾಥ ಶ್ರೀಗಳ ಪಟ್ಟಾಭಿಷೇಕ ಹಾಗೂ ಬಾಲಗಂಗಾಧರನಾಥ ಶ್ರೀಗಳ ಐಕ್ಯ ಸ್ಥಳ ಮತ್ತು ಸೇವಾ ಕಾರ್ಯಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಇದೇ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರವಾಗಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ನಿರ್ಮಲಾನಂದನಾಥ ಶ್ರೀಗಳು, ಪ್ರಧಾನಿ ಪ್ರವಾಸದ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರಮೋದಿ ಅವರು ಕಳೆದ ನವೆಂಬರ್‌ 28ರಂದು ಕೃಷ್ಣನೂರು ಉಡುಪಿಗೆ ಭೇಟಿ ನೀಡಿದ್ದರು. ಮಂಗಳೂರಿಗೆ ವಿಮಾನದ ಮೂಲಕ ಬಂದಿಳಿದ ಅವರು ಹೆಲಿಕಾಪ್ಟರ್‌ ಮೂಲಕ ಉಡುಪಿಗೆ ಆಗಮಿಸಿದ್ದರು.

ಉಡುಪಿಯ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಮೋದಿ,ಯವರು ಸ್ವರ್ಣ ಲೇಪಿತ ಕನಕನ ಕಿಂಡಿ ಉದ್ಘಾಟಿಸಿ, ಅದರ ಮೂಲಕ ಕಡೆಗೋಲು ಕೃಷ್ಣನ ದರ್ಶನ ಪಡೆದಿದ್ದರು. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಶ್ರೀಗಳು ಮೋದಿವರಿಗೆ ಭಾರತ ಭಾಗ್ಯವಿಧಾತ ಬಿರುದು ನೀಡಿ ಗೌರವಿಸಿದ್ದರು.

ಇದಕ್ಕೂ ಮುನ್ನ ಉಡುಪಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ ನಡೆಸಿ, ಬಳಿಕ ಉಡುಪಿ ಮಠದಲ್ಲಿ ನಡೆಯುತ್ತಿದ್ದ ಲಕ್ಷ ಕಂಠ ಗೀತಾರಾಧನೆಯಲ್ಲಿ ಪ್ರಧಾನ ಮೋದಿ ಅವರು ಭಾಗವಹಿಸಿ ಸಾವಿರಾರು ಭಕ್ತರ ಜೊತೆ ಭಾವಪೂರ್ಣವಾಗಿ ಗೀತಾ ಪಠಣದಲ್ಲಿ ತೊಡಗಿಸಿಕೊಂಡಿದ್ದರು.

RELATED ARTICLES

Latest News