ಬೆಳಗಾವಿ,ಡಿ.13- ಬೆಂಗಳೂರು ಆಯುಕ್ತಾಲಯ ವ್ಯಾಪ್ತಿಯಲ್ಲಿ 1879 ಬೋಧಕೇತರ ವೃಂದದ ಹುದ್ದೆಗಳು ಖಾಲಿ ಇವೆ. ಶೀಘ್ರದಲ್ಲೇ ಬೋಧಕೇತರ ವೃಂದದ ಎಲ್ಲಾ ಹುದ್ದೆಗಳಿಗೆ ಮುಂಬಡ್ತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದ್ದಾರೆ.
ಶಾಸಕ ಅನಿಲ್ ಚಿಕ್ಕಮಾದು ಅವರು ನಿಯಮ 351ರಡಿ ನೀಡಿರುವ ಸೂಚನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ ಮುಂಬಡ್ತಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾರ್ಯ ನಿರ್ವಹಣಾ ವರದಿ ಪರಿಶೀಲನಾ ಹಂತದಲ್ಲಿದೆ. ಶೀಘ್ರದಲ್ಲೇ ಬೋಧಕೇತರ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲಾಗುವುದು ಎಂದಿದ್ದಾರೆ.
ಕಾಲಕಾಲಕ್ಕೆ ಉದ್ಭವವಾಗುವ ಹಾಗೂ ಮುಂಬಡ್ತಿ ಪ್ರಕ್ರಿಯೆಯೆಲ್ಲಿ ಬಡ್ತಿಯನ್ನು ಮುಂದೂಡುವ ನೌಕರರಿಂದ, ಬಡ್ತಿ ನಂತರ ನಿವೃತ್ತಿ, ನಿಧನ ಮತ್ತಿತರ ಕಾರಣಗಳಿಂದ ಸ್ಥಾನಗಳು ತೆರವಾದಲ್ಲಿ ಬಡ್ತಿ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಆಯುಕ್ತಾಲಯ ವ್ಯಾಪ್ತಿಯಲ್ಲಿ 3740 ಬೋಧಕೇತರ ವೃಂದದ ಅಧಿಕಾರಿ/ನೌಕರರ ಹುದ್ದೆಗಳು ಮಂಜೂರಾಗಿವೆ. 1861 ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಇನ್ನು 1879 ಹುದ್ದೆಗಳು ಖಾಲಿ ಇವೆ ಎಂದು ಅವರು ವಿವರಣೆ ನೀಡಿದ್ದಾರೆ.
