Wednesday, April 29, 2026
Homeರಾಜ್ಯಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Public Works Department not given more money in the budget: Minister Satish Jarkiholi

ಬೆಂಗಳೂರು, ಮಾ.7- ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ ಈ ಬಾರಿ ಪರಿಸ್ಥಿತಿ ನಿಭಾಯಿಸಲು ಸಾಧ್ಯವಾಗಲಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕೇಳಿದ ಎಲ್ಲವನ್ನೂ ಮುಖ್ಯಮಂತ್ರಿಯವರು ಬಜೆಟ್‌ನಲ್ಲಿ ಕೊಟ್ಟಿದ್ದಾರೆ. ಸೇತುವೆಗಳ ನಿರ್ಮಾಣಕ್ಕೆ 20 ವರ್ಷಗಳಿಂದಲೂ ಆಧ್ಯತೆ ನೀಡಿರಲಿಲ್ಲ. ಈ ಬಾರಿ 2 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಹಣ ಸಿಕ್ಕಿದೆ. ಇದರಿಂದ ನಮಗೆ ನಿಭಾಯಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೆ-ಶಿಪ್‌ ಯೋಜನೆಯ ವ್ಯಾಪ್ತಿಗೆ 60 ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಹೆಚ್ಚು ಹಣ ದೊರೆತ್ತಿರುವುದರಿಂದ ಅನುಕೂಲವಾಗಲಿದೆ. ಬಾಕಿ ಬಿಲ್ಲುಗಳ ಬಿಡುಗಡೆಗೆ ಪ್ರತಿಭಟನೆ ನಡೆಸುವುದಾಗಿ ಗುತ್ತಿಗೆದಾರರು ಬೆದರಿಕೆ ಹಾಕಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಹಣಕಾಸು ಇಲಾಖೆಯನ್ನು ಮುಖ್ಯಮಂತ್ರಿಯವರು ನೋಡಿಕೊಳ್ಳುತ್ತಿದ್ದಾರೆ. ಗುತ್ತಿಗೆದಾರರ ಜೊತೆ ಚರ್ಚೆ ಮಾಡಿ, ಸಮಸ್ಯೆಯನ್ನು ಬಗೆ ಹರಿಸುತ್ತಾರೆ ಎಂದು ಸತೀಶ್‌ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಸಾಲ ಮಾಡದೆ ಯಾವ ಸರ್ಕಾರವೂ ಆಡಳಿತ ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಕೂಡ ಇದೇ ಪರಿಸ್ಥಿತಿಯಲ್ಲಿದೆ. ರಾಜ್ಯದ ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿ ಕಾಮಗಾರಿಯನ್ನು ನಿಲ್ಲಿಸಿಲ್ಲ ಎಂದು ತಿಳಿಸಿದರು.

ಯುವ ನಿಧಿಗೆ ಬಜೆಟ್‌ನಲ್ಲಿ ಅನುದಾನ ನೀಡಿಲ್ಲ ಎಂದ ಮಾತ್ರಕ್ಕೆ ಅದನ್ನು ಸ್ಥಗಿತಗೊಳಿಸಿಲ್ಲ. 2-3 ತಿಂಗಳಾದರೂ ಕೂಡ ಹಣವನ್ನು ತಲುಪಿಸಲಾಗುತ್ತಿದೆ. ಮುಂದೆಯೂ ಯುವ ನಿಧಿ ನಿಲ್ಲಿಸುವುದಿಲ್ಲ ಎಂದರು.

RELATED ARTICLES

Latest News