Homeರಾಜ್ಯ3 ಮೆಟ್ರೋ ರೈಲು ನಿಲ್ದಾಣಗಳ ಹೆಸರು ಬದಲಿಸಲು ರಾಮಲಿಂಗಾರೆಡ್ಡಿ ಪತ್ರ

3 ಮೆಟ್ರೋ ರೈಲು ನಿಲ್ದಾಣಗಳ ಹೆಸರು ಬದಲಿಸಲು ರಾಮಲಿಂಗಾರೆಡ್ಡಿ ಪತ್ರ

ಬೆಂಗಳೂರು, ಸೆ.12-ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಮೆಟ್ರೋ ರೈಲು ನಿಲ್ದಾಣಗಳ ಹೆಸರನ್ನು ಬದಲಾಯಿಸುವಂತೆ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ನಮ ಮೆಟ್ರೋ ರೈಲು ನಿಗಮಕ್ಕೆ ಪತ್ರ ಬರೆದಿದ್ದಾರೆ.

ಜೆ.ಪಿ.ನಗರ 4ನೇ ಹಂ ಮೆಟ್ರೋ ನಿಲ್ದಾಣವನ್ನುಎನ್‌.ಎಸ್‌‍.ಪಾಳ್ಯ ಮೆಟ್ರೋ ನಿಲ್ದಾಣವೆಂದು, ತಾವರೆಕೆರೆ ಮೆಟ್ರೋ ನಿಲ್ದಾಣವನ್ನು ಎಸ್‌‍.ಜಿ.ಪಾಳ್ಯ ಮೆಟ್ರೋ ನಿಲ್ದಾಣವೆಂದು ಹಾಗೂ ಡೈರಿ ವೃತ್ತ ಮೆಟ್ರೋ ನಿಲ್ದಾಣವನ್ನು ಲಕ್ಕಸಂದ್ರ ಮೆಟ್ರೋ ನಿಲ್ದಾಣವೆಂದು ಮರು ನಾಮಕರಣ ಮಾಡುವಂತೆ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಸಚಿವರು ತಿಳಿಸಿದ್ದಾರೆ.

ನನ್ನ ಮತ ಕ್ಷೇತ್ರವಾದ ಬಿಟಿಎಂ ಲೇಔಟ್‌ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಹಾಗೂ ನಿರ್ಮಾಣ ಹಂತದಲ್ಲಿರುವ ಮೆಟ್ರೋ ನಿಲ್ದಾಣಗಳ ಹೆಸರನ್ನು ಆಯಾ ನಿಲ್ದಾಣಗಳು ಇರುವ ಸ್ಥಳೀಯ ಪ್ರವೇಶದ ಹೆಸರು, ಐತಿಹಾಸಿಕ ಹಾಗೂ ಭೌಗೋಳಿಕ ಮಹತ್ವ ಮತ್ತು ಸಾರ್ವಜನಿಕರ ಸಾಮಾನ್ಯ ಅಭಿಪ್ರಾಯವನ್ನು ಪರಿಗಣಿಸಿ ಸೂಕ್ತವಾಗಿ ಮರುನಾಮಕರ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಪ್ರಸ್ತುತ ಕೆಲವು ಮೆಟ್ರೋ ನಿಲ್ದಾಣಗಳ ಹೆಸರುಗಳು ನಿಲ್ದಾಣ ಇರುವ ನಿಖರ ಸ್ಥಳ ಅಥವಾ ಆ ಪ್ರದೇಶದ ಜನರಿಗೆ ಹೆಚ್ಚು ಪರಿಚಿತವಾಗಿರುವ ಸ್ಥಳೀಯ ಹೆಸರನ್ನು ಪ್ರತಿಬಿಂಬಿಸುವುದಿಲ್ಲ. ಇದರಿಂದ ಸಾರ್ವಜನಿಕರಿಗೆ ನಿಲ್ದಾಣದ ಸ್ಥಳವನ್ನು ಗುರುತಿಸುವಲ್ಲಿ ಕೆಲವೊಮೆ ಗೊಂದಲ ಉಂಟಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಗಳು, ಸಾರ್ವಜನಿಕರು, ಸ್ಥಳೀಯ ಮುಖಂಡರುಗಳ ಅಭಿಪ್ರಾಯ ಪಡೆದು ಸಾರ್ವಜನಿಕ ಹಿತಾಸಕ್ತಿಗೆ ಅನುಗುವಾಗಿ ಪರಿಗಣಿಸಿ ಈ ಮೂರು ನಿಲ್ದಾಣಗಳ ಹೆಸರನ್ನು ಮರು ನಾಮಕರಣ ಮಾಡಲು ಕ್ರಮ ಕೈಗೊಳ್ಳಲು ಅವರು ಪತ್ರದಲ್ಲಿ ಕೋರಿದ್ದಾರೆ.

RELATED ARTICLES
spot_img

Latest News