Homeರಾಜ್ಯಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ : ಡಿಕೆಶಿ ಟೀಮ್‍ನ ಮೊದಲ ವಿಕೆಟ್ ಪತನ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ : ಡಿಕೆಶಿ ಟೀಮ್‍ನ ಮೊದಲ ವಿಕೆಟ್ ಪತನ

Ramalingareddy resigns as minister

ಬೆಂಗಳೂರು,ಜೂ.5- ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ತಮ ಸಂಪುಟದ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಸರ್ಕಾರ ರಚನೆಯಾದ ಮೂರು ದಿನ ತುಂಬುವ ಮೊದಲೇ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌‍ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಜಲಸಂಪನೂಲ ಖಾತೆ ನೀಡಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬೆಂಗಳೂರು ಅಭಿವೃದ್ಧಿ ಖಾತೆಯ ನಿರೀಕ್ಷೆಯಲ್ಲಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನೂಲ ಖಾತೆ ನೀಡಿರುವುದು ಅವರ ಬೇಸರಕ್ಕೆ ಪ್ರಮುಖ ಕಾರಣವಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲಿ ನನಗೆ ತಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್‌‍ ಪಕ್ಷಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಆತಸಾಕ್ಷಿಗೆ ವಿರುದ್ದವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿರುವ ಅವರು, ರಾಜೀನಾಮೆಯನ್ನು ಅಂಗೀಕರಿಸುವಂತೆ ಕೋರಿದ್ದಾರೆ.

ಶಾಸಕನಾಗಿ ಹಾಗೂ ಕಾಂಗ್ರೆಸ್‌‍ ಪಕ್ಷದ ಕಾರ್ಯಕರ್ತನಾಗಿ ಮುಂದುವರೆಉತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ರವಾನಿಸಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಖಾತೆ ಹಂಚಿಕೆಗೂ ಮುನ್ನ ರಾಮಲಿಂಗಾರೆಡ್ಡಿ ಅವರು ಅಸಮಾಧಾನ ಹೊರಹಾಕಿದ್ದರು. ಇದಾದ ನಂತರ ರಾತ್ರಿ ಮುಖ್ಯಮಂತ್ರಿ ಅವರು ರಾಮಲಿಂಗಾರೆಡ್ಡಿ ಅವರೊಂದಿಗೆ ಸಮಾಲೋಚನೆ ನಡೆಸಿ ಸಮಾಧಾನಪಡಿಸಿದ್ದರು ಎನ್ನಲಾಗಿದೆ.

ಆನಂತರವಷ್ಟೇ ಸಚಿವರಿಗೆ ಖಾತೆ ಹಂಚಿಕೆ ಮಾಡಿ ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ರಾಮಲಿಂಗಾರೆಡ್ಡಿ ಅವರು ತಮ ಅಸಮಾಧಾನ ವ್ಯಕ್ತಪಡಿಸಿ ಸಚಿವ ಸ್ಥಾನದಿಂದ ದೂರ ಉಳಿಯಲು ನಿರ್ಧರಿಸಿ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಕಳೆದ 2023ರಲ್ಲಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿದ್ದಾಗಲೂ ಬೆಂಗಳೂರು ಅಭಿವೃದ್ಧಿ ಖಾತೆಗೆ ರಾಮಲಿಂಗಾ ರೆಡ್ಡಿ ಆಸಕ್ತಿ ತೋರಿದ್ದರು. ಆ ಸಂದರ್ಭದಲ್ಲಿ ಮನವೊಲಿಸಿ ಸಾರಿಗೆ ಖಾತೆಯನ್ನು ನೀಡಲಾಗಿತ್ತು.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್‌‍ ಪಕ್ಷ ಬಿಡುವುದಿಲ್ಲ. ಶಾಸಕನಾಗಿ ಮುಂದುವರೆಯುತ್ತೇನೆ. ನಾನಾಗಿಯೇ ಸಚಿವ ಸ್ಥಾನವನ್ನು ಕೇಳಿರಲಿಲ್ಲ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ನೀಡುವುದಾಗಿ ಭರವಸೆ ನೀಡಿದ್ದರು. ಆ ಭರವಸೆ ಈಡೇರಿಲ್ಲ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News