ಬೆಂಗಳೂರು,ಸೆ.19- ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ನಾಳೆ ನಡೆಯಲಿರುವ ನೇಮಕಾತಿ ಪರೀಕ್ಷೆಯ ಸಂಬಂಧ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.
ನಾಳೆ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಕ್ತಾಯಗೊಳ್ಳುವವರೆಗೆ ಎಲ್ಲಾ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್‌್ಸ ಅಂಗಡಿಗಳನ್ನು ಮುಚ್ಚಲು ನಗರ ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.
ಕೆಎಸ್‌ಆರ್‌ಪಿಸಿ ಹುದ್ದೆಗಳ ಮತ್ತು ಸ್ಥಳೀಯ ವೃಂದದ ಕೆಎಸ್‌ಆರ್‌ಪಿ, ಕೆಎಸ್‌ಐಎಸ್‌ಎಫ್, ಭಾರತೀಯ ಮೀಸಲು ಪಡೆಗೆ ಉಳಿಕೆ ಮೂಲ ವೃದದ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಲು ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
