Homeರಾಜ್ಯಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡಿ : ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

Release the dues of sugarcane growers immediately: Ashok

ಬೆಂಗಳೂರು,ಫೆ.5- ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್‌ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,674 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಬ್ಬು ಪೂರೈಸಿದ 15 ದಿನಗಳಲ್ಲಿ ಬಿಲ್‌ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನು ಜಾರಿ ಮಾಡಲು ಕಾಂಗ್ರೆಸ್‌‍ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ. ಸಿಎಂ ಸಿದ್ದರಾಮಯ್ಯ ನವರೇ, ನಾಡಿನ ರೈತರ ಬದುಕು ಸುಭದ್ರಪಡಿಸಬೇಕಾದ ತಾವು ನಿಮ ಕುರ್ಚಿ ಭದ್ರಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ನಿಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ? ಎಂದು ಪ್ರಶ್ನೆ ಮಾಡಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ಕಾಂಗ್ರೆಸ್‌‍ ಸರ್ಕಾರ ನಿಜವಾದ, ಅಸಲಿ ಪೇಸಿಎಂ ಸರ್ಕಾರ ಎನ್ನುವುದಕ್ಕೆ ವಿಕ್ಟೋರಿಯಾ ಆಸ್ಪತ್ರೆಯ ಲೂಟಿಯೇ ಸಾಕ್ಷಿ! ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎನ್ನುವಂತೆ ಸಿಎಂ ಸಿದ್ದರಾಮಯ್ಯ ಆದಿಯಾಗಿ ಸಚಿವರು, ಅಧಿಕಾರಿಗಳು ಸೇರಿದಂತೆ ಇಡೀ ಕಾಂಗ್ರೆಸ್‌‍ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಇನ್ನು ಸಾಮಾನ್ಯ ಸಿಬ್ಬಂದಿಗಳು ಸುಮನಿರುತ್ತಾರೆಯೇ? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಸ್ಪತ್ರೆಯ ಅಧಿಕೃತ ಸ್ಕ್ಯಾನರ್‌ ತೆಗೆದು ಹಾಕಿ, ತಮ ವೈಯಕ್ತಿಕ ಬ್ಯಾಂಕ್‌ ಖಾತೆಯ ಯುಪಿಐ ಸ್ಕ್ಯಾನರ್‌ ಅಳವಡಿಸಿ ಬಡರೋಗಿಗಳಿಂದ 23 ಲಕ್ಷ ರೂಪಾಯಿ ಲೂಟಿ ಮಾಡಿರುವ ಆಸ್ಪತ್ರೆಯ ಸಿಬ್ಬಂದಿಗಳು, ಕಾಂಗ್ರೆಸ್‌‍ ಸರ್ಕಾರ ನಿಜವಾದ, ಅಸಲಿ ಬಿಜೆಪಿ ಸರ್ಕಾರ ಎಂದು ಸಾಬೀತು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಮೂರೂ ಬಿಟ್ಟವರು ಊರಿಗೇ ದೊಡ್ಡವರು ಎನ್ನುವಂತೆ, ಮುಂದಿನ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌‍ ಪಕ್ಷ ನಿರ್ಣಾಮ ಆಗಲಿದೆ ಎಂದು ಖಾತ್ರಿ ಆಗಿರುವ ಸಚಿವರು, ಶಾಸಕರು ನಿರ್ಲಜ್ಜವಾಗಿ ಎಗ್ಗಿಲ್ಲದೆ ಸಿಕ್ಕಸಿಕ್ಕ ಕಡೆ ಲೂಟಿ ಹೊಡೆಯುತ್ತಿದ್ದಾರೆ ಎಂದು ಅಶೋಕ್‌ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

RELATED ARTICLES

Latest News