Tuesday, April 21, 2026
Homeರಾಜ್ಯರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ಸಂಕಲ್ಪ : ಗೃಹ ಸಚಿವ ಪರಮೇಶ್ವರ್‌

ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ಸಂಕಲ್ಪ : ಗೃಹ ಸಚಿವ ಪರಮೇಶ್ವರ್‌

Resolved to make the state drug-addiction free: Home Minister Parameshwara

ಬೆಂಗಳೂರು, ಮಾ.1- ಇರಾನ್‌-ಇಸ್ರೇಲ್‌ ಸಂಘರ್ಷದಿಂದ ದುಬೈನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ಪೊಲೀಸ್‌‍ ಇಲಾಖೆಯಿಂದ ಆಯೋಜಿಲಾಗಿದ ವಾಕಥಾನ್‌ನಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಬೈನಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಪೂರ್ಣಪ್ರಮಾಣದ ಮಾಹಿತಿಗಳು ನಮಗಿನ್ನೂ ಬರಬೇಕಿದೆ. ಈವರೆಗಿನ ಮಾಹಿತಿಯ ಪ್ರಕಾರ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಪ್ರವಾಸಕ್ಕೆ ತೆರಳಿದ್ದ, 150 ವಿದ್ಯಾರ್ಥಿಗಳು ದುಬೈನಲ್ಲಿ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆ ತರುವ ಪ್ರಯತ್ನಗಳನ್ನು ನಮ ಸರ್ಕಾರ ನಡೆಸಿದೆ ಎಂದರು.ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದೊಂದಿಗೂ ಸಂಪರ್ಕ ಸಾಧಿಸಲಾಗಿದೆ. ಪೊಲೀಸ್‌‍ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತಿರುವುದಾಗಿ ತಿಳಿಸಿದರು.

ಜನ ಜಾಗೃತಿಗಾಗಿ ವಾಕಥಾನ್‌: ಮಾದಕ ವಸ್ತುಗಳ ವಿರುದ್ಧ ಜಾಗೃತಿ, ಸೈಬರ್‌ ಕ್ರೈಂ ಕುರಿತ ತಿಳಿವಳಿಕೆಗಳಿಗೆ ಜನರಲ್ಲಿ ಅರಿವು ಮೂಡಿಸಲು ಕಳೆದ ಮೂರು ವರ್ಷಗಳಿಂದಲೂ ರಾಜ್ಯದಲ್ಲಿ ವಾಕಥಾನ್‌ ನಡೆಸಲಾಗುತ್ತಿದೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ರಾಜ್ಯವನ್ನು ಮಾದಕ ವಸ್ತುಗಳ ವ್ಯಸನ ಮುಕ್ತಗೊಳಿಸುವ ಸಂಕಲ್ಪ ಹೊಂದಿದೆ. ಇದಕ್ಕಾಗಿ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ವಾಕಥಾನ್‌ ಅನ್ನು ಆಯೋಜಿಸುತ್ತಿದೆ ಎಂದರು.

ಮಾದಕ ವಸ್ತುಗಳ ಹಾವಳಿಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಅದನ್ನು ಮಟ್ಟ ಹಾಕಲು ನಿರಂತರ ಪ್ರಯತ್ನ ನಡೆಯುತ್ತಿದೆ. ಒಂದಲ್ಲಾ ಒಂದು ದಿನ ನಾವು ಗುರಿ ತಲುಪುತ್ತೇವೆ ಎಂದರು.ಕರ್ನಾಟಕ ರಾಜ್ಯ ಪೊಲೀಸ್‌‍ ಇಲಾಖೆ ಹಾಗೂ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌‍ಬಿಐ) ಸಹಯೋಗದಲ್ಲಿ ನಮ ಪೊಲೀಸ್‌‍ ನಮ ಹೆಮೆ ಘೋಷವಾಕ್ಯದಡಿ ಆಯೋಜಿಸಿದ್ದ 3ನೇ ವರ್ಷದ ಪೊಲೀಸ್‌‍ ಓಟ (ಕರ್ನಾಟಕ ಪೊಲೀಸ್‌‍ ರನ್‌) ಸ್ಪರ್ಧೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ವಿಧಾನಸೌಧದ ಬೃಹತ್‌ ಮೆಟ್ಟಿಲುಗಳ ಮುಂಭಾಗದಲ್ಲಿ ಚಾಲನೆ ನೀಡಿದರು.

ಡ್ರಗ್‌್ಸ ಮುಕ್ತ ಕರ್ನಾಟಕ, ಸೈಬರ್‌ ಅಪರಾಧ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ 10 ಕಿ.ಮೀ. ಹಾಗೂ 5 ಕಿ.ಮೀ. ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.

RELATED ARTICLES

Latest News