Wednesday, April 29, 2026
Homeರಾಜ್ಯಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್‌ ಝೋನ್‌ ಎಂದು ಘೋಷಣೆ

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್‌ ಝೋನ್‌ ಎಂದು ಘೋಷಣೆ

Sambra Airport in Belgaum declared a red zone

ಬೆಳಗಾವಿ,ಮಾ.7- ಇಸ್ರೇಲ್‌, ಇರಾನ್‌, ಅಮೆರಿಕ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ರೆಡ್‌ ಝೋನ್‌ ಎಂದು ಘೋಷಿಸಲಾಗಿದೆ.

ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ (ಆಉಅಂ) ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದ ಸುತ್ತಮುತ್ತ 8 ಕಿಲೋಮೀಟರ್‌ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಡ್ರೋನ್‌ ಹಾಗೂ ಅನ್‌ಮ್ಯಾನ್ದ ಏರಿಯಲ್‌ ವಾಹನಗಳ (ಂಗಿ) ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರೆಡ್‌ ಝೋನ್‌ ಮತ್ತು ಯೆಲ್ಲೋ ಝೋನ್‌ ವ್ಯಾಪ್ತಿಯಲ್ಲಿ ಅನುಮತಿ ಇಲ್ಲದೆ ಡ್ರೋನ್‌ ಹಾರಾಟ ನಡೆಸುವುದು ಕಾನೂನುಬಾಹಿರ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.ಈ ಸಂಬಂಧ ಬೆಳಗಾವಿ ಪೊಲೀಸ್‌‍ ಕಮಿಷನರ್‌ ಭೂಷಣ್‌ ಬೊರಸೆ ಪತ್ರಿಕಾ ಪ್ರಕಟಣೆ ಹೊರಡಿಸಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ. ವಿಮಾನ ನಿಲ್ದಾಣದ ಭದ್ರತೆ ದೃಷ್ಟಿಯಿಂದ ಈ ಕ್ರಮ ಅತ್ಯಾವಶ್ಯಕವಾಗಿದ್ದು, ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಸ್ತುತ ಜಾಗತಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸ್‌‍ ಇಲಾಖೆ ಮನವಿ ಮಾಡಿದೆ.

RELATED ARTICLES

Latest News