ಬೆಂಗಳೂರು,ಏ.6- ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಶೀಘ್ರದಲ್ಲೇ ಕೇಂದ್ರ ಸರ್ಕಾರದ ಅಧಿಕೃತ ಅಪ್ಲಿಕೇಶನ್ ಆದ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ.
ಈ ಕುರಿತು ಎಕ್‌್ಸಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿರುವ ಡಿಜಿಲಾಕರ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ 12ನೇ ತರಗತಿಯ ಫಲಿತಾಂಶ 2026 ಶೀಘ್ರದಲ್ಲೇ ಡಿಜಿಲಾಕರ್‌ನಲ್ಲಿ ಲಭ್ಯವಾಗಲಿದೆ. ಯಾವುದೇ ಸಾಲುಗಟ್ಟಿ ನಿಲ್ಲುವ ಅಗತ್ಯವಿಲ್ಲ, ಯಾವುದೇ ಕಾಗದಪತ್ರಗಳ ಜಂಜಾಟವಿಲ್ಲ. ನಿಮ ಫಲಿತಾಂಶಗಳನ್ನು ಅತ್ಯಂತ ಸುರಕ್ಷಿತವಾಗಿ ಪಡೆದುಕೊಳ್ಳಿ. ಶೀಘ್ರವೇ ನಿಮ ಅಂಕಗಳನ್ನು ಪರಿಶೀಲಿಸಲು ಸಿದ್ಧರಾಗಿರಿ ಎಂದು ತಿಳಿಸಿದೆ.
ಜೊತೆಗೆ ಹೆಚ್ಚಿನ ಮಾಹಿತಿಗಾಗಿ ಡಿಜಿ ಲಾಕರ್ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಲಾಗಿದೆ. ಸಾಮಾನ್ಯವಾಗಿ ಫಲಿತಾಂಶ ಪ್ರಕಟವಾದ ತಕ್ಷಣ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಸರ್ವರ್ ಸಮಸ್ಯೆ ಉಂಟಾಗಿ ವಿದ್ಯಾರ್ಥಿಗಳು ಪರದಾಡುವುದು ಸಾಮಾನ್ಯ. ಆದರೆ ಡಿಜಿಲಾಕರ್ ಮೂಲಕ ವಿದ್ಯಾರ್ಥಿಗಳು ಯಾವುದೇ ಅಡೆತಡೆಯಿಲ್ಲದೆ, ಸುಲಭವಾಗಿ ತಮ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಅದರ ಡಿಜಿಟಲ್ ಪ್ರತಿಯನ್ನು ತಕ್ಷಣವೇ ಡೌನ್‌ಲೋಡ್ ಮಾಡಿಕೊಳ್ಳಬಹುದು. ಇಲ್ಲಿ ಲಭ್ಯವಾಗುವ ಡಿಜಿಟಲ್ ಅಂಕಪಟ್ಟಿಗಳು ಭೌತಿಕ ಅಂಕಪಟ್ಟಿಗಳಿಗೆ ಸಮನಾದ ಅಧಿಕೃತ ಮಾನ್ಯತೆಯನ್ನು ಹೊಂದಿರುತ್ತವೆ.
ಮುಂದಿನ ವ್ಯಾಸಂಗಕ್ಕೆ ಪ್ರವೇಶಾತಿ ಪಡೆಯಲು ಅಥವಾ ಇತರ ಯಾವುದೇ ಅಧಿಕೃತ ಕೆಲಸಗಳಿಗೆ ಈ ಡಿಜಿಟಲ್ ಅಂಕಪಟ್ಟಿಯನ್ನು ನೇರವಾಗಿ ಬಳಸಿಕೊಳ್ಳಬಹುದು. ಶಾಲೆಯಿಂದ ಅಥವಾ ಕಾಲೇಜಿನಿಂದ ಮೂಲ ಅಂಕಪಟ್ಟಿ ಕೈಸೇರುವವರೆಗೂ ಕಾಯುವ ಅಗತ್ಯ ಇರುವುದಿಲ್ಲ. ತಂತ್ರಜ್ಞಾನದ ಬಳಕೆಯೊಂದಿಗೆ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳಿಗೆ ಫಲಿತಾಂಶದ ಲಭ್ಯತೆಯನ್ನು ಮತ್ತಷ್ಟು ಸುಗಮ ಹಾಗೂ ಪಾರದರ್ಶಕಗೊಳಿಸಿದೆ. ವಿದ್ಯಾರ್ಥಿಗಳು ಈಗಲೇ ತಮ ಡಿಜಿಲಾಕರ್ ಖಾತೆಯನ್ನು ಸಕ್ರಿಯಗೊಳಿಸಿಕೊಂಡು, ಫಲಿತಾಂಶ ಪ್ರಕಟವಾದ ತಕ್ಷಣ ತಮ ಅಂಕಗಳನ್ನು ಸುಲಭವಾಗಿ ಪಡೆಯಲು ಸಜ್ಜಾಗುವುದು ಉತ್ತಮ.
