Homeರಾಜ್ಯBIG STORY : ಭಾರಿ ವಿವಾದಕ್ಕೆ ಕಾರಣವಾಯ್ತು ಮಸೀದಿ-ಕಲ್ಯಾಣ ಮಂಟಪಗಳಲ್ಲಿ ಎಸ್‌‍ಐಆರ್‌..!?

BIG STORY : ಭಾರಿ ವಿವಾದಕ್ಕೆ ಕಾರಣವಾಯ್ತು ಮಸೀದಿ-ಕಲ್ಯಾಣ ಮಂಟಪಗಳಲ್ಲಿ ಎಸ್‌‍ಐಆರ್‌..!?

SIR in mosques has caused a huge controversy

ಬೆಂಗಳೂರು,ಜು.3- ರಾಜ್ಯದಾದ್ಯಂತ ಚುನಾವಣಾ ಆಯೋಗವು ಕೈಗೊಂಡಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌‍ ಐಆರ್‌) ಪ್ರಕ್ರಿಯೆಯು ಇದೀಗ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಪಾರದರ್ಶಕವಾಗಿ ನಡೆಯಬೇಕಿದ್ದ ಈ ಪ್ರಕ್ರಿಯೆಯು ಆರಂಭಿಕ ಹಂತದಲ್ಲೇ ಗೊಂದಲಗಳು, ಅವ್ಯವಸ್ಥೆ ಮತ್ತು ರಾಜಕೀಯ ಆರೋಪ-ಪ್ರತ್ಯಾರೋಪಗಳಿಗೆ ಸಾಕ್ಷಿಯಾಗಿದ್ದು, ಆಡಳಿತ ಯಂತ್ರದ ಕಾರ್ಯವೈಖರಿಯ ಬಗ್ಗೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ರಾಜ್ಯದ ವಿವಿಧ ಕಡೆಗಳಲ್ಲಿ ಬಿಎಲ್‌ಒ ಗಳು ನಿಗದಿತ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬದಲು, ಖಾಸಗಿ ಸ್ಥಳಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ. ವಿಶೇಷವಾಗಿ ಮಸೀದಿಗಳು ಮತ್ತು ಖಾಸಗಿ ಕಲ್ಯಾಣ ಮಂಟಪಗಳನ್ನು ಬಿಎಲ್‌ಒಗಳು ತಮ ಕಚೇರಿಯನ್ನಾಗಿ ಬಳಸಿಕೊಳ್ಳುತ್ತಿರುವುದು ಗಂಭೀರ ಆಕ್ಷೇಪಕ್ಕೆ ಕಾರಣವಾಗಿದೆ. ಮತದಾರರ ಪಟ್ಟಿಯಂತಹ ಸೂಕ್ಷ್ಮ ದಾಖಲೆಗಳನ್ನು ಸರ್ಕಾರಿ ಕಚೇರಿಯ ಹೊರಗೆ ಕೊಂಡೊಯ್ದು, ಖಾಸಗಿ ವ್ಯಕ್ತಿಗಳ ಸಹಭಾಗಿತ್ವದಲ್ಲಿ ಪರಿಷ್ಕರಣೆ ಮಾಡುತ್ತಿರುವುದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ.

ಮತದಾರರ ಪಟ್ಟಿಯಂತಹ ಸೂಕ್ಷ್ಮ ದಾಖಲೆಗಳನ್ನು ಸರ್ಕಾರಿ ಕಚೇರಿಯ ಹೊರಗೆ ಕೊಂಡೊಯ್ದು, ಖಾಸಗಿ ವ್ಯಕ್ತಿಗಳ ಸಹಭಾಗಿತ್ವದಲ್ಲಿ ಪರಿಷ್ಕರಣೆ ಮಾಡುತ್ತಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.ಪ್ರಸ್ತುತ ಗೊಂದಲಗಳು ಪ್ರಮುಖವಾಗಿ ರಾಮನಗರ, ಕೋಲಾರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ತೀವ್ರವಾಗಿ ಕಂಡುಬಂದಿವೆ. ಅರ್ಹ ಮತದಾರರ ಹೆಸರುಗಳನ್ನು ಏಕಾಏಕಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸ್ಥಳೀಯರನ್ನು ಕಡೆಗಣಿಸಿ, ಹೊರಗಿನವರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿವೆ. ಸಾರ್ವಜನಿಕರು ಮಾಹಿತಿ ಕೇಳಲು ಹೋದಾಗ ಅಧಿಕಾರಿಗಳು ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಪ್ರಮುಖ ಆರೋಪವಾಗಿದೆ.

ಕೋಲಾರದಲ್ಲಿ ಸಮುದಾಯ ಭವನಗಳು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕ್ರಿಯೆ ನಡೆಸುತ್ತಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.ಬೂತ್‌ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸುವ ಬದಲು ಹೊಸದೊಂದು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಂಡಿದ್ದಾರೆ. ಬಡಾವಣೆಗಳ ಒಂದೆಡೆ ಕುಳಿತು ಸಾರ್ವಜನಿಕರನ್ನು ತಾವಿದ್ದ ಜಾಗಕ್ಕೆ ಕರೆಸಿಕೊಂಡು ಅರ್ಜಿ ಭರ್ತಿ ಮಾಡುವ ಕೆಲಸವನ್ನು ಸಿಬ್ಬಂದಿ ಮಾಡುತ್ತಿದ್ದಾರೆ.

ಕೋಲಾರ ನಗರದ ಕುರುಬರಪೇಟೆ ಬಡಾವಣೆಯಲ್ಲೂ ಕಳೆದ ಎರಡು ದಿನಗಳಿಂದ ಇದೇ ಮಾದರಿಯಲ್ಲಿ ಸಮೀಕ್ಷಾ ಕಾರ್ಯ ಮುಂದುವರಿದಿದೆ. ಅಂಗನವಾಡಿ ಕೇಂದ್ರಗಳ ಬಳಿ ಟೇಬಲ್‌ ಹಾಕಿಕೊಂಡಿರುವ ಬಿಎಲ್‌ಒಗಳು, ಸ್ಥಳೀಯ ನಾಗರಿಕರನ್ನು ಅಲ್ಲಿಗೇ ಕರೆಸಿಕೊಂಡು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ ಅರ್ಜಿಗಳನ್ನು ಭರ್ತಿ ಮಾಡಿಸಿಕೊಳ್ಳುತ್ತಿದ್ದಾರೆ. ಅರ್ಹ ಮತದಾರರ ಹೆಸರುಗಳನ್ನು ಏಕಾಏಕಿ ಪಟ್ಟಿಯಿಂದ ತೆಗೆದು ಹಾಕಲಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿವೆ.

ಸ್ಥಳೀಯರನ್ನು ಕಡೆಗಣಿಸಿ, ಹೊರಗಿನವರನ್ನು ಪಟ್ಟಿಗೆ ಸೇರಿಸಲಾಗುತ್ತಿದೆ ಎಂಬ ದೂರುಗಳು ವ್ಯಾಪಕವಾಗಿವೆ. ಸಾರ್ವಜನಿಕರು ಮಾಹಿತಿ ಕೇಳಲು ಹೋದಾಗ ಅಧಿಕಾರಿಗಳು ಸರಿಯಾದ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬುದು ಪ್ರಮುಖ ಆರೋಪವಾಗಿದೆ.

ಈ ಗೊಂದಲದ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ಶೋಭಾ ಕರಂದ್ಲಾಜೆ ಅವರು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದು, ಸರ್ಕಾರಿ ನಿಯಮಾವಳಿಗಳನ್ನು ಗಾಳಿಗೆ ತೂರಿ, ಮತದಾರರ ಪಟ್ಟಿಯನ್ನು ಖಾಸಗೀಕರಣಗೊಳಿಸುತ್ತಿರುವ ಕ್ರಮವನ್ನು ತಕ್ಷಣವೇ ನಿಲ್ಲಿಸಬೇಕು. ಈ ಪ್ರಕ್ರಿಯೆಯಲ್ಲಿ ನಡೆದಿರುವ ಲೋಪದೋಷಗಳನ್ನು ಸರಿಪಡಿಸಿ, ಮತದಾರರ ಪಟ್ಟಿಯ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಆಯೋಗಕ್ಕೆ ಮನವಿ ಮಾಡಿದ್ದಾರೆ.

ಖಾಸಗಿ ಸ್ಥಳಗಳಲ್ಲಿ ಮತದಾರರ ಪರಿಷ್ಕರಣೆ ನಡೆಸುತ್ತಿರುವ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಪಾರದರ್ಶಕತೆ: ಪ್ರತಿಯೊಂದು ಹಂತದಲ್ಲೂ ರಾಜಕೀಯ ಪಕ್ಷಗಳ ಏಜೆಂಟರ ಸಮುಖದಲ್ಲಿ ಪ್ರಕ್ರಿಯೆ ನಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು. ಮತದಾರರ ಪಟ್ಟಿಯಲ್ಲಿ ಹೆಸರನ್ನು ಸೇರಿಸುವ ಅಥವಾ ತೆಗೆಯುವ ವಿಧಾನದ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡುವ ಮೂಲಕ ಗೊಂದಲಗಳನ್ನು ನಿವಾರಿಸಬೇಕು. ಪ್ರಜಾಪ್ರಭುತ್ವದ ಮಹೋತ್ಸವಕ್ಕೆ ಮತದಾರರ ಪಟ್ಟಿಯೇ ಬುನಾದಿ. ಈ ಬುನಾದಿಯಲ್ಲೇ ಬಿರುಕು ಮೂಡಿದರೆ,

ಭವಿಷ್ಯದ ಚುನಾವಣೆಗಳ ವಿಶ್ವಾಸಾರ್ಹತೆ ಮಣ್ಣುಪಾಲಾಗಲಿದೆ. ಆಯೋಗವು ಕಾಲಹರಣ ಮಾಡದೆ, ತಕ್ಷಣವೇ ಎಚ್ಚೆತ್ತುಕೊಂಡು ವ್ಯವಸ್ಥೆಯನ್ನು ಸರಿಪಡಿಸಬೇಕು ಎಂಬುದು ಬಿಜೆಪಿ ಮತ್ತು ಜೆಡಿಎಸ್‌‍ ನಾಯಕರ ಆಗ್ರಹವಾಗಿದೆ.

ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಅಡಿಪಾಯವನ್ನು ಬಲಪಡಿಸುವ ಉದ್ದೇಶದಿಂದ ಈ ಪ್ರಕ್ರಿಯೆಯನ್ನು ಕೈಗೊಂಡಿದೆ. ಆದರೆ, ಮೈದಾನ ಮಟ್ಟದಲ್ಲಿ ನಡೆಯುತ್ತಿರುವ ಅವ್ಯವಸ್ಥೆಗಳು ಆಯೋಗದ ಮೇಲಿರುವ ನಂಬಿಕೆಯನ್ನು ಅಲುಗಾಡಿಸುತ್ತಿವೆ. ಬಿಎಲ್‌ಒಗಳಿಗೆ ಸೂಕ್ತ ತರಬೇತಿಯ ಕೊರತೆ, ರಾಜಕೀಯ ಪಕ್ಷಗಳ ಕಾರ್ಯಕರ್ತರ ಹಸ್ತಕ್ಷೇಪ ಮತ್ತು ಕಣ್ಗಾವಲು ವ್ಯವಸ್ಥೆಯ ವೈಫಲ್ಯವೇ ಈ ಗೊಂದಲಗಳಿಗೆ ಪ್ರಮುಖ ಕಾರಣಗಳಾಗಿವೆ ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

RELATED ARTICLES

Latest News