Homeರಾಜ್ಯವಿಜಯದಶಮಿ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

ವಿಜಯದಶಮಿ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

ಮೈಸೂರು,ಅ.21- ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಪ್ರಯುಕ್ತ ಇಂದು ಬೆಳಗ್ಗೆ 4 ಗಂಟೆಯಿಂದಲೇ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿತ್ತು.

ಬೆಳಗ್ಗೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿ ಅಭಿಷೇಕ, ಚಂಡಿ ಹೋಮ, ಕುಂಕುಮಾರ್ಚನೆ, ಸಹಸ್ರನಾಮ ಅರ್ಚನೆ ನೆರವೇರಿತ್ತು. ಬೆಳಗ್ಗೆ 6.30 ಕ್ಕೆ ಮಹಾ ಮಂಗಳಾರತಿ ನೆರವೇರಿದ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಪೂಜೆಯ ನಂತರ ಬೆಳಗ್ಗೆ 7.15 ಗಂಟೆಗೆ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯು ಚಾಮುಂಡಿ ಬೆಟ್ಟದಿಂದ ಮೈಸೂರು ಅರಮನೆಯತ್ತ ಭವ್ಯ ಮೆರವಣಿಗೆಯಲ್ಲಿ ಹೊರಟಿತ್ತು.

ಬೆಳಗ್ಗೆ 7 ಗಂಟೆಯಿಂದಲೇ ರಸ್ತೆ ಬದಿ ನಿಂತಿದ್ದ ಜನಸಾಗರ :
ಬೆಳಗ್ಗೆ 7 ಗಂಟೆಯಿಂದಲೇ ಚಾಮುಂಡಿ ಬೆಟ್ಟದಿಂದ ಅರಮನೆಯವರೆಗಿನ ರಸ್ತೆಯ ಎರಡೂ ಬದಿಯಲ್ಲಿ ಸಾವಿರಾರು ಭಕ್ತರು ಸಾಲುಗಟ್ಟಿ ನಿಂತಿದ್ದರು. ತಾಯಿಯ ದರ್ಶನ ಪಡೆಯಲು ಚಿಕ್ಕ ಮಕ್ಕಳು, ಮಹಿಳೆಯರು, ವೃದ್ಧರು ಸೇರಿದಂತೆ ಸಾವಿರಾರು ಜನ ಮುಂಜಾನೆಯಿಂದಲೇ ಕಾದು ಕುಳಿತಿದ್ದರು.

ಜೈ ಚಾಮುಂಡಿ ತಾಯಿ ಎಂಬ ಜಯಘೋಷದೊಂದಿಗೆ ಭಕ್ತರು ಹೂ, ಕುಂಕುಮ ಎರಚಿ ದೇವಿಯನ್ನು ಸ್ವಾಗತಿಸಿದ್ದರು. ರಸ್ತೆಯ ಇಕ್ಕೆಲಗಳಲ್ಲಿ ಜನ ತುಂಬಿ ತುಳುಕುತ್ತಿದ್ದ ದೃಶ್ಯ ಕಂಡುಬಂದಿತ್ತು.

200 ಪೊಲೀಸ್‌‍ ಸಿಬ್ಬಂದಿಯಿಂದ ಬಿಗಿ ಭದ್ರತೆ :
ಭಕ್ತರ ಸುರಕ್ಷತೆಗಾಗಿ ಬೆಳಗ್ಗೆ 7 ಗಂಟೆಯಿಂದಲೇ 200 ಪೊಲೀಸ್‌‍ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಚಾಮುಂಡಿ ಬೆಟ್ಟದ ತಪ್ಪಲಿನಿಂದ ಅರಮನೆಯವರೆಗೆ ಬ್ಯಾರಿಕೇಡ್‌ ಅಳವಡಿಸಿ, ಸಂಚಾರ ಮಾರ್ಗ ಬದಲಾವಣೆ ಮಾಡಿ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತಾ ಕ್ರಮ ವಹಿಸಲಾಗಿತ್ತು.ಅರಮನೆ ತಲುಪಿದ ನಂತರ ದೇವಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ, ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಯಿತು.

RELATED ARTICLES
spot_img

Latest News