Thursday, April 16, 2026
Homeರಾಜ್ಯಇಬ್ಬರು ತಜ್ಞರಿಂದ ಶ್ರೀನಂದ ಮರಣೋತ್ತರ ಪರೀಕ್ಷೆ

ಇಬ್ಬರು ತಜ್ಞರಿಂದ ಶ್ರೀನಂದ ಮರಣೋತ್ತರ ಪರೀಕ್ಷೆ

Srinanda's postmortem examination by two experts

ಚಿಕ್ಕಮಗಳೂರು,ಏ.11- ಚಂದ್ರದ್ರೋಣ ಪರ್ವತ ಶ್ರೇಣಿಯ ತಪ್ಪಲಿನಲ್ಲಿ ಪತ್ತೆಯಾಗಿದ್ದ ಕೇರಳ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇಬ್ಬರು ವೈದ್ಯರು ಸೂಕ್ಷ್ಮವಾಗಿ ಮರಣೋತ್ತರ ಪರೀಕ್ಷೆಯ ಪ್ರಕ್ರಿಯೆಗಳು ಅತ್ಯಂತ ಜಾಗರೂಕತೆಯಿಂದ ನಡೆಸಿ ನಂತರ ಹಸ್ತಾಂತರಿಸಲಾಯಿತು. ಈ ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಪೊಲೀಸರು ಇಬ್ಬರು ತಜ್ಞರಿಂದ ಪರೀಕ್ಷೆ ನಡೆಸುವಂತೆ ವೈದ್ಯಕೀಯ ಮಂಡಳಿಗೆ ವಿಶೇಷ ಮನವಿ ಸಲ್ಲಿಸಿದ್ದರು.

ಸಾಮಾನ್ಯವಾಗಿ ಯಾವುದೇ ಮರಣೋತ್ತರ ಪರೀಕ್ಷೆಯನ್ನು ಒಬ್ಬರೇ ವೈದ್ಯರು ನಿರ್ವಹಿಸುವುದು ರೂಢಿ. ಆದರೆ, ಈ ಪ್ರಕರಣದಲ್ಲಿ ಯಾವುದೇ ಲೋಪದೋಷಗಳಿಗೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಫಾರೆನ್ಸಿಕ್‌ ವಿಭಾಗದ ತಜ್ಞ ವೈದ್ಯರಾದ ಡಾ.ಲೋಹಿತ್‌ ಹಾಗೂ ಡಾ. ಜಯಲಕ್ಷ್ಮಿ ಅವರನ್ನೊಳಗೊಂಡ ವಿಶೇಷ ತಂಡವನ್ನು ರಚಿಸಲಾಗಿತ್ತು.

ಇವರಿಬ್ಬರು ವೈದ್ಯರು ಮೃತದೇಹದ ಸಂಪೂರ್ಣ ತಪಾಸಣೆ ನಡೆಸಿ ಮರಣೋತ್ತರ ಪರೀಕ್ಷಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.ವೈದ್ಯಕೀಯ ವಿಧಿವಿಧಾನಗಳು ಮುಗಿದ ಬಳಿಕ ಬಾಲಕಿಯ ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರದಿಂದ ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಅಂತಿಮ ವಿಧಿವಿಧಾನಗಳನ್ನು ನೆರವೇರಿಸಲು ಕುಟುಂಬಸ್ಥರು ಮೃತದೇಹವನ್ನು ಅಂಬ್ಯುಲೆನ್ಸ್ ಮೂಲಕ ಕೇರಳಕ್ಕೆ ಕೊಂಡೊಯ್ದರು. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್‌‍ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ ಬಾಲಕಿಯು ಆಕಸಿಕವಾಗಿ ಕಾಲು ಜಾರಿ ಬಿದ್ದಿದ್ದಾಳೆಯೇ ಅಥವಾ ಆತಹತ್ಯೆ ಮಾಡಿಕೊಂಡಿದ್ದಾಳೆಯೇ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ ಎಂದು ಹೇಳಿದ್ದಾರೆ.

RELATED ARTICLES

Latest News