Homeರಾಜ್ಯಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2ರ ಕೀ ಉತ್ತರ ಪ್ರಕಟ

ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆ-2ರ ಕೀ ಉತ್ತರ ಪ್ರಕಟ

SSLC Exam-2 Key Answers Published

ಬೆಂಗಳೂರು, ಮೇ 20-ಎಸ್‌‍.ಎಸ್‌‍.ಎಲ್‌.ಸಿ. ಪರೀಕೆ-2ರ ವಿಷಯವಾರು ಕೀ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದ್ದು, ಆಕ್ಷೇಪಣೆ ಸಲ್ಲಿಸಲು ನಾಳೆ ಕಡೆಯ ದಿನವಾಗಿದೆ.

ಕೀ ಉತ್ತರಗಳನ್ನು ನಿನ್ನೆ ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಕೀ ಉತ್ತರಗಳಿಗೆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರಿಂದ ಆಕ್ಷೇಪಣೆಗಳನ್ನು ಮಂಡಲಿ ಆಹ್ವಾನಿಸಿದೆ. ನಾಳೆ ಸಂಜೆ 5.30 ಗಂಟೆಯೊಳಗೆ ಆಕ್ಷೇಪಣೆಗಳನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಮಂಡಲಿ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

RELATED ARTICLES

Latest News