Sunday, April 12, 2026
Homeರಾಜ್ಯನಾಳೆಯಿಂದ SSLC ಪರೀಕ್ಷೆ : 2,871 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ, ಉಚಿತ ಬಸ್ ಸೇವೆ

ನಾಳೆಯಿಂದ SSLC ಪರೀಕ್ಷೆ : 2,871 ಪರೀಕ್ಷಾ ಕೇಂದ್ರಗಳಲ್ಲಿ ಸಿದ್ಧತೆ, ಉಚಿತ ಬಸ್ ಸೇವೆ

SSLC exam from tomorrow: Preparations at 2,871 exam centers

ಬೆಂಗಳೂರು,ಮಾ.17- ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಅತಿ ಮಹತ್ವದ ಘಟ್ಟ ಎನಿಸಿದ ಪ್ರಸಕ್ತ 2026 -27ನೇ ಸಾಲಿನ ಎಸ್‌‍ಎಸ್‌‍ಎಲ್‌ಸಿ -1 ಪರೀಕ್ಷೆಯು ನಾಳೆಯಿಂದ ರಾಜ್ಯದಾದ್ಯಂತ ಭಾರೀ ಭಿಗಿ ಭದ್ರತಾ ನಡುವೆ ಆರಂಭವಾಗಲಿದೆ.

ನಾಳೆ ಪ್ರಥಮ ಭಾಷಾ ಪತ್ರಿಕೆಯೊಂದಿಗೆ ಪರೀಕ್ಷೆ ಆರಂಭವಾವಾಗಿ ಏಪ್ರಿಲ್‌ 2ರಂದು ಸಮಾಜ ವಿಜ್ಞಾನ ಪತ್ರಿಕೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಪರೀಕ್ಷೆಗಳು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15 ಗಂಟೆಯವರೆಗೆ ನಡೆಯಲಿವೆ.

ಈ ಬಾರಿ ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಗೆ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 8,12,855 ಹೊಸಬರು, 62,845 ಪುನರಾವರ್ತಿತ ವಿದ್ಯಾರ್ಥಿಗಳು, 27,189 ಖಾಸಗಿ ವಿದ್ಯಾರ್ಥಿಗಳಿದ್ದು, 2,871 ಒಟ್ಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ವಿದ್ಯಾರ್ಥಿಗಳಿಗೆ ಈಗಾಗಲೇ ಮಾದರಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (ಕೆಎಸ್‌‍ ಇಎಬಿ) ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಅಕ್ರಮ ಮುಕ್ತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಬಾರಿ ಪರೀಕ್ಷಾ ಫಲಿತಾಂಶವನ್ನು ಏಪ್ರಿಲ್‌ 7ರಂದು ಪ್ರಕಟಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಇಲಾಖೆ ಮುಂಚಿತವಾಗಿಯೇ ಘೋಷಿಸಿದೆ.ಪೊಲೀಸ್‌‍ ಇಲಾಖೆ, ಗುಪ್ತಚರ ವಿಭಾಗ, ಜಿಲ್ಲಾಧಿಕಾರಿಗಳು, ಬಿಇಒ ಹಾಗೂ ಡಿಡಿಪಿಐಗಳೊಂದಿಗೆ ಸಮಗ್ರ ಸಭೆ ನಡೆಸಲಾಗಿದೆ. ಕಳೆದ ವರ್ಷಕ್ಕಿಂತ ಹೆಚ್ಚಿನ ಸಿದ್ಧತೆ ಈ ಬಾರಿ ಕೈಗೊಳ್ಳಲಾಗಿದೆ.

ಅಕ್ರಮ ತಡೆಗೆ ಕಠಿಣ ಕ್ರಮ:

ಪರೀಕ್ಷಾ ಅಕ್ರಮಗಳನ್ನು ತಡೆಯಲು ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಮಂಡಳಿಯು ಈ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪರೀಕ್ಷೆಯ ಸಮಯ ದಲ್ಲಿ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಲು ಮಂಡಳಿ ನಿರ್ಧರಿಸಿದೆ.

ಸಿಸಿ ಟಿವಿ ಕ್ಯಾಮೆರಾ ಕಡ್ಡಾಯ:

ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷಾ ಅವಧಿಯುದ್ದಕ್ಕೂ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಯಲಿದ್ದು, ವಿಶೇಷ ತಂಡಗಳು ನಿರಂತರ ನಿಗಾ ವಹಿಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲೆಕ್ಟ್ರಾನಿಕ್‌ ಸಾಧನಗಳು ನಿಷೇಧ:

ಇದೇ ವೇಳೆ ಪರೀಕ್ಷಾ ಕೇಂದ್ರಗಳೊಳಗೆ ಮೊಬೈಲ್‌ ಫೋನ್‌, ಸಾರ್ಟ್‌ವಾಚ್‌ ಸೇರಿದಂತೆ ಎಲೆಕ್ಟ್ರಾನಿಕ್‌ ಸಾಧನಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ನಿಷೇಧಿತ ವಸ್ತುಗಳನ್ನು ಹೊಂದಿರುವ ವಿದ್ಯಾರ್ಥಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಸೈಬರ್‌ ಕೇಂದ್ರಗಳ ಮೇಲೆ ನಿಗಾ:

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಕೋಚಿಂಗ್‌ ಸೆಂಟರ್‌, ಸೈಬರ್‌ಕೆಫೆ ಹಾಗೂ ಜೆರಾಕ್‌್ಸ ಅಂಗಡಿಗಳ ಮೇಲೆ ವಿಶೇಷ ನಿಗಾವಹಿಸಲು ಪೊಲೀಸ್‌‍ ಇಲಾಖೆಗೆ ಸೂಚಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೋಪ ದೋಷಗಳಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಅಥವಾ ಸುಳ್ಳು ವದಂತಿಗಳನ್ನು ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ವಿದ್ಯಾರ್ಥಿಗಳು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ಅಧಿಕೃತ ಪ್ರವೇಶಪತ್ರವಿಲ್ಲದೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶವಿ ರುವುದಿಲ್ಲ. ಪರೀಕ್ಷೆ ಆರಂಭವಾಗುವ ಕನಿಷ್ಠ 30 ನಿಮಿಷಗಳ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಇರಬೇಕು. ಶಾಲೆಯು ನಿಗದಿಪಡಿಸಿದ ಸಮವಸ್ತ್ರ ಧರಿಸುವುದು ಸೂಕ್ತ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್‌ ವ್ಯಾಪ್ತಿಯಲ್ಲಿ 144ನೇ ಕಲಂ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಪರೀಕ್ಷಾ ಸಮಯದಲ್ಲಿ ಕೇಂದ್ರದ ಸಮೀಪವಿರುವ ಎಲ್ಲಾ ಜೆರಾಕ್‌್ಸ ಅಂಗಡಿಗಳನ್ನು ಮುಚ್ಚಲು ಆದೇಶಿಸ ಲಾಗಿದೆ.

ಕುಡಿಯುವ ನೀರು, ಬೆಳಕು ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಗಳ ಕೊರತೆಯಾಗದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ಸೂಚನೆಗಳನ್ನು ಎಚ್ಚರಿಕೆಯಿಂದ ಪಾಲಿಸಬೇಕು, ಮುಂಚಿತವಾಗಿ ಕೇಂದ್ರಗಳನ್ನು ತಲುಪಬೇಕು ಮತ್ತು ಎಸ್‌‍ಎಸ್‌‍ಎಲ್‌ಸಿ ಪರೀಕ್ಷೆಗಳು ಸುಗಮವಾಗಿ ನಡೆಯುವಂತೆ ಅಧಿಕಾರಿಗಳೊಂದಿಗೆ ಸಹಕರಿಸಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷ ಪ್ರಕಾಶ್‌ ಜಿ.ಟಿ.ನಿಟ್ಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರೀಕ್ಷಾ ಸಹಾಯವಾಣಿ ಸಂಖ್ಯೆ: ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಸಮಸ್ಯೆಗಳಿಗಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸಹಾಯವಾಣಿ ಸಂಖ್ಯೆ080-23310076 / 080-23310075 ಸಂಪರ್ಕಿಸ ಬಹುದು.

ಒಟ್ಟು ವಿದ್ಯಾರ್ಥಿಗಳು – 9,02,889
ಹೊಸಬರು-8,12,855
ಪುನರಾವರ್ತಿತ – 62,845
ಖಾಸಗಿ-27,189

ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌‍ ಸೇವೆ

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌‍ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಸೌಲಭ್ಯ ಒದಗಿಸಲಾಗಿದೆ.

ನಾಳೆಯಿಂದ ಏ.2 ರ ವರೆಗೆ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ, ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ ನಿಗಮದ ಪ್ರಕಟಣೆ ತಿಳಿಸಿದೆ.

RELATED ARTICLES

Latest News