Thursday, January 8, 2026
Homeರಾಜ್ಯಇಂದಿನಿಂದ ಎಸ್‌‍ಎಸ್‌‍ಎಲ್‌ಸಿ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭ

ಇಂದಿನಿಂದ ಎಸ್‌‍ಎಸ್‌‍ಎಲ್‌ಸಿ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ಆರಂಭ

SSLC first phase preliminary exam begins today

ಬೆಂಗಳೂರು,ಜ.5- ಇಂದಿನಿಂದ ಎಸ್‌‍ಎಸ್‌‍ಎಲ್‌ಸಿ ವಿದ್ಯಾರ್ಥಿಗಳಿಗೆ ಮೊದಲ ಹಂತದ ಪೂರ್ವ ತಯಾರಿ ಪರೀಕ್ಷೆ ರಾಜ್ಯದಲ್ಲಿ ಆರಂಭಗೊಂಡಿದೆ. ಮುಖ್ಯ ಪರೀಕ್ಷೆಗೂ ಮುನ್ನ 3 ಹಂತದಲ್ಲಿ ಪರೀಕ್ಷೆ ನಡೆಯಲಿದ್ದು,ಮುಂದಿನ ತಿಂಗಳು ಫೆ.28ಕ್ಕೆ ಮುಕ್ತಾಯಗೊಳ್ಳಲಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌‍ಇಎಬಿ) ವಿದ್ಯಾರ್ಥಿಗಳ ಮನೋಭಲ ವೃದ್ದಿಸಲು ಮುಂದಾಗಿದೆ.

ಈ ಪರೀಕ್ಷೆಯು ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ದಿಕ್ಸೂಚಿಯಾಗಿರಲಿದೆ ಎಂದು ಹೇಳಲಾಗಿದೆ. ಮೊದಲ ಹಂತದ ಪರೀಕ್ಷೆಯು ಇಂದಿನಿಂದ ಆರಂಭವಾಗಿ, ಜನವರಿ 10ಕ್ಕೆ ಮುಕ್ತಾಯವಾದರೆ, ಎರಡನೇ ಹಂತದ ಪರೀಕ್ಷೆ ಜನವರಿ 27ರಿಂದ ಆರಂಭವಾಗಿ ಫೆಬ್ರುವರಿ 2ಕ್ಕೆ ಮುಗಿಯಲಿದೆ. ಕೊನೆಯ ಹಂತದ ಪರೀಕ್ಷೆ ಫೆಬ್ರುವರಿ 23ರಂದು ಆರಂಭವಾಗಲಿದ್ದು, ಅದೇ ತಿಂಗಳ 28ಕ್ಕೆ ಕೊನೆಗೊಳ್ಳಲಿದೆ.

ಇದೇ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಭಾರಿ ವೇಳಾಪಟ್ಟಿಯ ಅನುಸಾರ ಆಯಾ ದಿನದ ಪ್ರಶ್ನೆಪತ್ರಿಕೆಗಳನ್ನು ಮುಖ್ಯಶಿಕ್ಷಕರ ಲಾಗಿನ್‌ಗೆ ಅಪ್‌ಲೋಡ್‌‍ ಮಾಡಲಾಗುವುದು. ಅವುಗಳನ್ನು ಡೌನ್‌ಲೋಡ್‌‍ ಮಾಡಿಕೊಂಡು ಮುದ್ರಿಸಿ, ಪರೀಕ್ಷೆ ನಡೆಸಬೇಕು ಎಂದು ತಿಳಿಸಲಾಗಿದೆ.

ಮುಖ್ಯ ಪರೀಕ್ಷೆಯಂತೆಯೇ ಸಿದ್ಧತಾ ಪರೀಕ್ಷೆಯೂ ಪಾರದರ್ಶಕವಾಗಿ ನಡೆಯಲಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಮುಖ್ಯ ಶಿಕ್ಷಕರಿಗೆ ಮಾರ್ಗದರ್ಶನ ಮಾಡುವ ಹೊಣೆ ಜಿಲ್ಲಾ ಉಪನಿರ್ದೇಶಕರಿಗೆ ನೀಡಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ, ನಕಲು ಮತ್ತಿತರ ಪ್ರಕರಣಗಳು ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದ್ದು, ಪರೀಕ್ಷೆ ಮುಕ್ತಾಯವಾದ ಮರುದಿನವೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿ ಫಲಿತಾಂಶ ಪ್ರಕಟವಾಗಲಿದೆ. ಮುಖ್ಯ ಪರೀಕ್ಷೆ ಮಾರ್ಚ್‌ 18ರಿಂದ ಆರಂಭವಾಗಲಿದೆ.

RELATED ARTICLES

Latest News