ಬೆಂಗಳೂರು,ನ.9- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿ ಪೊಲೀಸರು ಮತ್ತೆ ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ನೋಟೀಸ್ ನೀಡಿದ್ದಾರೆ.
ತಮ ಮೊಬೈಲ್, ಲ್ಯಾಪ್‌ಟಾಪ್ ಸಮೇತ ಇಂದು ವಿಚಾರಣೆಗೆ ಬರುವಂತೆ ಸಿಸಿಬಿ ಅಧಿಕಾರಿಗಳು ಸೂಚಿಸಿದ್ದಾರೆ.ಮೊದಲ ಸುತ್ತಿನ ವಿಚಾರಣೆ ಮುಗಿದ ನಂತರ ಕೃಪಾ ಆಳ್ವಾ ಅವರು ವಿದೇಶಕ್ಕೆ ತೆರಳಿದ್ದರು.
ಅವರು ನ.7ರಂದು ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ವಿದೇಶದಿಂದ ಮರಳಿ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಅವರಿಗೆ ನೋಟೀಸ್ ನೀಡಿದ್ದಾರೆ.
