ಬೆಂಗಳೂರು,ಜ.16- ಕಳೆದ ಹಲವಾರು ವರ್ಷಗಳಿಂದ ಎಸ್‌ಎಸ್‌ಎಲ್ ಸಿ ಹಾಗೂ ದ್ವೀತಿಯ ಪಿಯೂಸಿ ಪೂರ್ವ ಸಿದ್ದತಾ ಹಾಗೂ ಅಂತಿಮ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಹಣದ ಆಸೆಗಾಗಿ ಸೋರಿಕೆ ಮಾಡುತ್ತಿದ್ದ ಶಾಲಾ ಕಾಲೇಜುಗಳ ವಿರುದ್ಧ ಪದವಿ ಪೂರ್ವ ಶಿಕ್ಷಣ ಇಲಾಖೆ ಕಟ್ಟು ನಿಟ್ಟಿನ ಕ್ರಮ ಜರುಗಿಸಲು ಮುಂದಾಗಿದೆ.
ಇನ್ನು ಮುಂದೆ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ನಡೆಯುವ ಮುನ್ನ ಅಪ್ಪಿತಪ್ಪಿ ಸೋರಿಕೆಯಾದರೆ, ಅಂತಹ ಕಾಲೇಜುಗಳ ಮಾನ್ಯತೆಯನ್ನು ಶಾಶ್ವತವಾಗಿ ರದ್ದಾಗಲಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವವರು ಇನ್ನು ಮುಂದೆ ಒಂದಲ್ಲ, ನೂರು ಬಾರಿ ಆಲೋಚಿಸಬೇಕು.
ಜ. 19 ರಿಂದ ಫೆ. 2 ರವರೆಗೆ ನಡೆಯಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳ ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಯಾವುದೇ ಲೋಪ ಕಂಡು ಬಂದರೆ ಕಾಲೇಜುಗಳ ಮಾನ್ಯತೆಯನ್ನು ಹಿಂತೆಗೆದುಕೊಳ್ಳುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
ಇತ್ತೀಚಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲ ತಾಣವಾದ . ವ್ಯಾಟ್ಸಾಪ್, ಇನ್‌್ಸಸ್ಟಾಗ್ರಾಮ್, ಫೇಸ್‌ಬುಕ್ ಕಡೆ ಪ್ರಶ್ನೆ ಪತ್ರಿಕೆಗಳು ಹರಿದಾಡುತ್ತಿದ್ದವು. ಅದರಲ್ಲೂ ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆಗಳು ಪುನರಾವರ್ತನೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಠಿಣ ನಿರ್ದೇಶನಗಳನ್ನು ಹೊರಡಿಸಿದೆ.
ಒಂದು ವೇಳೆ ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಲೀಕ್ ಆದರೆ ಸಂಬಂಧಪಟ್ಟ ಕಾಲೇಜುಗಳ ಮಾನ್ಯತೆ ರದ್ದುಗೊಳಿಸುವುದು ಸೇರಿದಂತೆ ಗಂಭೀರ ಕ್ರಮಗಳನ್ನು ತೆಗೆದುಕೊಳ್ಳಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.
ದ್ವಿತೀಯ ಪಿಯು ವಿದ್ಯಾರ್ಥಿಗಳ ಮೊದಲ ಪೂರ್ವಸಿದ್ಧತಾ ಪರೀಕ್ಷೆಗಳಲ್ಲಿ ಯಾವುದೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲವಾದರೂ, ಈ ಬಾರಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮ ತಾಣಗಳಲ್ಲಿ ಮತ್ತು ಕೆಲವು ಯೂಟ್ಯೂಬ್ ಚಾನೆಲ್‌ಗಳಲ್ಲಿ ಅಪ್‌ಲೋಡ್ ಮಾಡಲಾಗಿರುವುದರಿಂದ ಇಲಾಖೆಯು ಜಾಗರೂಕವಾಗಿದೆ.ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿಯು ಪೊಲೀಸ್ ದೂರು ದಾಖಲಿಸಿದ ನಂತರ ಸೋರಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿದಂತೆ ಎಂಟು ಜನರನ್ನು ಬಂಧಿಸಲಾಗಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ಅಪ್‌ಲೋಡ್ ಮಾಡದಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿರುವ ಇಲಾಖೆ ನಕಲಿ ಪ್ರಶ್ನೆಪತ್ರಿಕೆಗಳನ್ನು ಅಪ್‌ಲೋಡ್ ಮಾಡಿದರೂ ಕ್ರಮ ಕೈಗೊಳ್ಳಲಾಗುವುದು, ಎಲ್ಲಾ ಪಿಯು ಕಾಲೇಜುಗಳಿಗೆ ಹೊರಡಿಸಲಾದ ಸುತ್ತೋಲೆಯಲ್ಲಿ, ವಿದ್ಯಾರ್ಥಿಗಳು ಕ್ಯಾಂಪಸ್‌ಗಳಲ್ಲಿ ಮೊಬೈಲ್ ಫೋನ್ ಬಳಸುವುದನ್ನು ನಿಷೇಧಿಸುವ ನಿಯಮವನ್ನು ಇಲಾಖೆ ಪುನರುಚ್ಚರಿಸಿದೆ. ವಿದ್ಯಾರ್ಥಿಗಳು ತಮ ಮೊಬೈಲ್ ಫೋನ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಡಿವಾಣ ಹಾಕಲು ಇಲಾಖೆ ಕಸರತ್ತು ನಡೆಸುತ್ತಿದ್ದು, ಇದೀಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಜಾರಿಗೊಳಿಸಿರುವ ನಿರ್ದೇಶನದ ಪ್ರಕಾರ, ಪರೀಕ್ಷೆ ಆರಂಭವಾಗುವ ಮುನ್ನವೇ ಅನುದಾನಿತ ಹಾಗೂ ಅನುದಾನ ರಹಿತ ಕಾಲೇಜುಗಳಿಗೆ ಎಚ್ಚರಿಕೆ ನೀಡಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಅದು ಯಾವ ಕಾಲೇಜಿನಿಂದ ಆಗಿದೆ ಎಂಬುದನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಅನುದಾನಿತ ಕಾಲೇಜುಗಳಿಗೆ ಕ್ರಮ:
ಪ್ರಶ್ನೆ ಪತ್ರಿಕೆ ಲೀಕ್ ಆದರೆ ಅಥವಾ ಗೌಪ್ಯತೆ ಕಾಪಾಡದಿದ್ದರೆ ಸಂಬಂಧಪಟ್ಟ ಕಾಲೇಜಿನ ಅನುದಾನವನ್ನು ಕಡಿತಗೊಳಿಸುವ ಅಥವಾ ಸಂಪೂರ್ಣವಾಗಿ ನಿಲ್ಲಿಸುವ ಶಿಫಾರಸ್ಸು ಮಾಡಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಇದು ಶಿಕ್ಷಣ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನಡೆಯಲಿದೆ.ಒಂದು ವೇಳೆ ಅನುದಾನ ರಹಿತ ಕಾಲೇಜುಗಳಲ್ಲಿ ಸೋರಿಕೆ ಸಂಭವಿಸಿದರೆ ಮಾನ್ಯತೆಯನ್ನು ಶಾಶ್ವತವಾಗಿ ರದ್ದುಗೊಳಿಸಲಾಗುವುದು. ಇದರಿಂದ ಕಾಲೇಜು ಮುಚ್ಚುವ ಸ್ಥಿತಿ ಉಂಟಾಗಬಹುದು.
ವ್ಯಾಟ್‌್ಸಆಪ್, ಇನ್‌ಸ್ಟಾಗ್ರಾಮ್ ಅಥವಾ ಯಾವುದೇ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್‌ನಲ್ಲಿ ಪ್ರಶ್ನೆ ಪತ್ರಿಕೆ ಹರಿಬಿಟ್ಟರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ವಾರ್ನಿಂಗ್ ಕೊಟ್ಟಿದೆ. ವಿದ್ಯಾರ್ಥಿಗಳ ಮೇಲೂ ಕಠಿಣ ಕ್ರಮ ತೆಗೆದುಕೊಳ್ಳಲು ಇಲಾಖೆ ಸಿದ್ಧವಾಗಿದೆ.
ನೋಡಲ್ ಕೇಂದ್ರದಿಂದಲೇ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಕೇಂದ್ರದ ಪ್ರಾಂಶುಪಾಲರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗುವುದು ಎಂದು ಇಲಾಖೆ ಹೇಳಿದೆ. ಜೊತೆಗೆ ಕರ್ನಾಟಕ ಸಿವಿಲ್ ಸರ್ವಿಸಸ್ (ವರ್ಗೀಕರಣ, ನಿಯಂತ್ರಣ ಮತ್ತು ಮೇಲನವಿ) ಕಾಯ್ದೆ 1957ರ ಅಡಿಯಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ನೋಡಲ್ ಕೇಂದ್ರದಿಂದ ಮುಂಚಿತವಾಗಿ ಪ್ರಶ್ನೆ ಪತ್ರಿಕೆ ಸಂಗ್ರಹಿಸುವಂತಿಲ್ಲ ಎಂಬ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಇತ್ತೀಚಿಗೆ ನಡೆದ ದ್ವಿತೀಯ ಪಿಯುಸಿ ಪ್ರಿಪರೇಟರಿ ಪರೀಕ್ಷೆ-1ರಲ್ಲಿ ಶಿವಮೊಗ್ಗ, ತುಮಕೂರು, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೆ ಒಳಗಾಗಿದ್ದರು. ಇದರ ಬೆನ್ನಲ್ಲೇ ಇಲಾಖೆಯು ಸಭೆ ನಡೆಸಿ ಈ ಕಠಿಣ ನಿರ್ದೇಶನಗಳನ್ನು ಹೊರಡಿಸಿದೆ. ನ್ಯೂಸ್ 18ರ ಸತತ ವರದಿಗಳು ಇಲಾಖೆಯನ್ನು ಎಚ್ಚರಿಸಿದ್ದು, ಪರೀಕ್ಷೆ-2ರಲ್ಲಿ ಇದನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುವುದು ಎಂದು ತಿಳಿದುಬಂದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿದ್ದ ಶಾಲಾ-ಕಾಲೇಜುಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ