ಬೆಂಗಳೂರು,ಏ.10- ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿನಿ ಆತಹತ್ಯೆಗೆ ಶರಣಾಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೋರಾಯನಪಾಳ್ಯದ ನಿವಾಸಿ ತನುಶ್ರೀ (17) ಆತಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿ.
ನಿನ್ನೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾದ ತನುಶ್ರೀ ಮೂರು ವಿಷಯಗಳಲ್ಲಿ ಅನುತ್ತೀರ್ಣಗೊಂಡಿರುವುದು ತಿಳಿದು ಮನೆಯಲ್ಲಿ ಫ್ಯಾನಿಗೆ ವೆಲ್ನಿಂದ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾಳೆ.
ಕೆಲ ಸಮಯದ ಬಳಿಕ ತಾಯಿ ಗಮನಿಸಿ ತಕ್ಷಣ ಸ್ಥಳೀಯರ ಸಹಾಯದಿಂದ ನೇಣಿನ ಕುಣಿಕೆಯಿಂದ ಮಗಳನ್ನು ಇಳಿಸಿದ್ದಾರೆ.
ಸುದ್ದಿ ತಿಳಿದು ಹೆಬ್ಬಾಳ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದು, ಸ್ಥಳದಲ್ಲಿ ಸದ್ಯಕ್ಕೆ ಯಾವುದೇ ಡೆತ್ನೋಟ್ ಪತ್ತೆಯಾಗಿಲ್ಲ. ಮೃತದೇಹವನ್ನು ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಕೊಲೆ ಶಂಕೆ: ತನುಶ್ರೀ ಫಲಿತಾಂಶದಿಂದ ಆತಹತ್ಯೆ ಮಾಡಿಕೊಂಡಿಲ್ಲ, ಆಕೆ ಅಂತಹ ಹುಡುಗಿಯಲ್ಲ, ಮಾನಸಿಕವಾಗಿ ಸದೃಢಳಾಗಿದ್ದಳು. ಆಕೆಯನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಪೊಲೀಸರ ತನಿಖೆಯಿಂದಷ್ಟೇ ಇದು ಆತಹತ್ಯೆಯೋ ಅಥವಾ ಕೊಲೆಯೋ ಎಂಬುವುದು ಗೊತ್ತಾಗಲಿದೆ.
