Homeರಾಜ್ಯಪ್ರಶ್ನೆಗಳಿಗೆ ಉತ್ತರಿಸದ ಅಧಿಕಾರಿಗಳಿಗೆ ಸುಧೀರ್ ಕುಮಾರ್ ಮುರೊಳ್ಳಿ ಫುಲ್ ಕ್ಲಾಸ್

ಪ್ರಶ್ನೆಗಳಿಗೆ ಉತ್ತರಿಸದ ಅಧಿಕಾರಿಗಳಿಗೆ ಸುಧೀರ್ ಕುಮಾರ್ ಮುರೊಳ್ಳಿ ಫುಲ್ ಕ್ಲಾಸ್

ಕೊಪ್ಪ: 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ದೇಶಕ್ಕೆ ಸೇವೆ ಸಲ್ಲಿಸಿದ ಯೋಧನಿಗೆ ಜಾತಿ ಪ್ರಮಾಣಪತ್ರ ನೀಡಲು ವಿಳಂಬ ಮಾಡಿರುವ ಅಧಿಕಾರಿಗಳ ವಿರುದ್ಧ ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ನಡೆದ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾ ಸೇವೆ’ ಸಭೆಯಲ್ಲಿ ಈ ಘಟನೆ ನಡೆದಿದೆ.

ಯೋಧನಿಗೆ ಜಾತಿ ಪ್ರಮಾಣಪತ್ರ ನೀಡದಿರುವ ಕುರಿತು ಸಭೆಯಲ್ಲಿ ಪ್ರಶ್ನಿಸಿದ ಸುಧೀರ್ ಕುಮಾರ್ ಮುರೊಳ್ಳಿ ಅವರು, ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಕಾನೂನುಬದ್ಧವಾಗಿ ತ್ವರಿತವಾಗಿ ಮಾಡಿಕೊಡಬೇಕು ಎಂದು ತಹಸೀಲ್ದಾರ್ ಹಾಗೂ ಕಂದಾಯ ನಿರೀಕ್ಷಕರನ್ನು ತರಾಟೆಗೆ ತೆಗೆದುಕೊಂಡರು.

ಮುರೊಳ್ಳಿ ಅವರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲು ಸಾಧ್ಯವಾಗದೆ ಕಂದಾಯ ನಿರೀಕ್ಷಕ (RI) ಸಭೆಯಿಂದ ತೆರಳಿ, ಶಾಸಕರ ಬಳಿ ತನ್ನನ್ನು ಅಮಾನತು ಮಾಡುವಂತೆ ಹೇಳಿಕೊಂಡು ಹೋದರು ಎಂದು ಸಭೆಯಲ್ಲಿ ತಿಳಿದುಬಂದಿದೆ. ಈ ವೇಳೆ ಶಾಸಕರು ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಇದೇ ಸಂದರ್ಭದಲ್ಲಿ, ಜಾತಿ ಪ್ರಮಾಣಪತ್ರ ನೀಡುವ ವಿಚಾರದಲ್ಲಿ ತಹಸೀಲ್ದಾರ್ ಅವರ ಕಾರ್ಯವೈಖರಿ ಬಗ್ಗೆಯೂ ಸುಧೀರ್ ಕುಮಾರ್ ಮುರೊಳ್ಳಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ತಹಸೀಲ್ದಾರ್ ಅವರು ವೈಯಕ್ತಿಕ ದ್ವೇಷದ ಕಾರಣದಿಂದ ಯೋಧನಿಗೆ ಪ್ರಮಾಣಪತ್ರ ನೀಡಲು ವಿಳಂಬ ಮಾಡುತ್ತಿದ್ದಾರೆ ಎಂಬ ಆರೋಪವೂ ಸಭೆಯಲ್ಲಿ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ವೈಯಕ್ತಿಕ ಕಾರಣಗಳಿಂದ ಸಾರ್ವಜನಿಕರ ಕೆಲಸಗಳಿಗೆ ಅಡ್ಡಿಯಾಗಬಾರದು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು. ಸರ್ಕಾರದ ‘ಪ್ರಜಾ ಸೇವೆ’ ಕಾರ್ಯಕ್ರಮದಲ್ಲಿ ಅಧಿಕಾರಿಗಳೇ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡಲು ವಿಫಲರಾದ ಘಟನೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

RELATED ARTICLES
spot_img

Latest News