ಗ್ರಾಮೀಣ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳು ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣ ಪಡೆದು ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಆಶಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜಾರಿಗೊಳಿಸಲಾಗುತ್ತಿರುವ ಸುಜ್ಞಾನನಿಧಿ ವಿದ್ಯಾರ್ಥಿವೇತನ’ ಕಾರ್ಯಕ್ರಮ ಸಾವಿರಾರು ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ನೆರವಾಗುತ್ತಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರಂಪರೆಯಲ್ಲಿ ವಿದ್ಯಾದಾನಕ್ಕೆ ವಿಶೇಷ ಸ್ಥಾನವಿದ್ದು, ಗ್ರಾಮೀಣ ಶಿಕ್ಷಣದ ಅಭಿವೃದ್ಧಿಗೆ ಹಲವು ವರ್ಷಗಳಿಂದ ವಿವಿಧ ಕಾರ್ಯಕ್ರಮಗಳನ್ನು ಹಮಿಕೊಳ್ಳಲಾಗುತ್ತಿದೆ. ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಗ್ರಾಮೀಣ ಶಿಕ್ಷಣದ ಉನ್ನತಿಗಾಗಿ ಜ್ಞಾನ ದೀಪ ಶಿಕ್ಷಕರಿಗೆ ನೆರವು, ಶಾಲೆಗಳಿಗೆ ಬೆಂಚು-ಡೆಸ್ಕ್ಗಳ ವಿತರಣೆ, ಶಾಲಾ ಕಟ್ಟಡಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಅನುದಾನ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳಲಾಗಿದೆ.
ಇವುಗಳ ಪೈಕಿ ಸುಜ್ಞಾನನಿಧಿ ವಿದ್ಯಾರ್ಥಿ ವೇತನ' ಪ್ರಮುಖ ಕಾರ್ಯಕ್ರಮವಾಗಿದೆ. ಗ್ರಾಮೀಣ ಪ್ರದೇಶದ ಬಡ ಕುಟುಂಬಗಳ ಮಕ್ಕಳು ಕೂಡ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣ ಪಡೆದು ಉನ್ನತ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ 2007ರಲ್ಲಿ ಸುಜ್ಞಾನನಿಧಿ ವಿದ್ಯಾರ್ಥಿವೇತನ’ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಕಳೆದ ಸುಮಾರು 19 ವರ್ಷಗಳಲ್ಲಿ ಈ ಯೋಜನೆಯ ಮೂಲಕ ಅನೇಕ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ತಮ ಜೀವನದಲ್ಲಿ ಹೊಸ ಅವಕಾಶಗಳನ್ನು ಕಂಡುಕೊಂಡಿದ್ದಾರೆ.
ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣದ ವೆಚ್ಚವು ಸಾಮಾನ್ಯ ಶಿಕ್ಷಣಕ್ಕಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವು ಮಹತ್ವದ ನೆರವಾಗುತ್ತಿದೆ. ವಿಶೇಷವಾಗಿ ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳಿಗೆ ಈ ಯೋಜನೆಯು ಉನ್ನತ ಶಿಕ್ಷಣದ ಅವಕಾಶವನ್ನು ಸುಲಭಗೊಳಿಸಿದೆ. ಆರ್ಥಿಕ ಕಾರಣಗಳಿಂದ ವೃತ್ತಿಪರ ಶಿಕ್ಷಣದಿಂದ ದೂರ ಉಳಿಯಬೇಕಾದ ಪರಿಸ್ಥಿತಿಯಲ್ಲಿದ್ದ ಅನೇಕ ವಿದ್ಯಾರ್ಥಿಗಳಿಗೆ ಈ ನೆರವು ಶಿಕ್ಷಣ ಮುಂದುವರಿಸಲು ಪ್ರೋತ್ಸಾಹ ನೀಡಿದೆ.
ಮಾಸಿಕ ವಿದ್ಯಾರ್ಥಿವೇತನದ ವಿಶೇಷತೆ:
ಸಾಮಾನ್ಯವಾಗಿ ಹಲವು ವಿದ್ಯಾರ್ಥಿವೇತನಗಳು ವರ್ಷಕ್ಕೆ ಒಮೆ ನೀಡಲಾಗುತ್ತವೆ. ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ `ಸುಜ್ಞಾನನಿಧಿ ವಿದ್ಯಾರ್ಥಿವೇತನ’ವನ್ನು ವಿದ್ಯಾರ್ಥಿಗಳ ವ್ಯಾಸಂಗದ ಅವಧಿಯಲ್ಲಿ ಪ್ರತಿ ತಿಂಗಳು ನೀಡುತ್ತಿರುವುದು ಈ ಯೋಜನೆಯ ಪ್ರಮುಖ ವಿಶೇಷತೆಯಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಶಿಕ್ಷಣದ ಅವಧಿಯಲ್ಲಿ ನಿರಂತರ ಆರ್ಥಿಕ ಬೆಂಬಲ ದೊರೆಯುತ್ತದೆ.
ಉನ್ನತ ಶಿಕ್ಷಣದ ಅವಕಾಶ:
`ಸುಜ್ಞಾನನಿಧಿ ವಿದ್ಯಾರ್ಥಿವೇತನ’ದ ನೆರವಿನಿಂದ ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿಗಳು ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಮತ್ತು ತಾಂತ್ರಿಕ ಶಿಕ್ಷಣವನ್ನು ಪೂರ್ಣಗೊಳಿಸಿ ತಮ ವೃತ್ತಿಜೀವನದಲ್ಲಿ ಮುನ್ನಡೆಯುತ್ತಿದ್ದಾರೆ. ಸಾಮಾನ್ಯ ಬಡ ಕುಟುಂಬದ ವಿದ್ಯಾರ್ಥಿಯೊಬ್ಬರು ಆರ್ಥಿಕ ಅಡಚಣೆಗಳನ್ನು ಮೀರಿ ಉನ್ನತ ಶಿಕ್ಷಣ ಪಡೆಯಲು ಈ ಕಾರ್ಯಕ್ರಮ ಪ್ರೇರಣೆಯಾಗಿದೆ.
ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ಅಡಚಣೆಗಳು ಉನ್ನತ ಶಿಕ್ಷಣದ ಹಾದಿಯಲ್ಲಿ ತಡೆಯಾಗ ಬಾರದು ಎಂಬ ಆಶಯದೊಂದಿಗೆ ನಡೆಯು ತ್ತಿರುವ ಸುಜ್ಞಾನನಿಧಿ ಕಾರ್ಯಕ್ರಮವು ಹಲವು ಕುಟುಂಬಗಳಿಗೆ ಶೈಕ್ಷಣಿಕ ಬೆಂಬಲದ ವ್ಯವಸ್ಥೆಯಾಗಿ ರೂಪುಗೊಂಡಿದೆ. ಶಿಕ್ಷಣದ ಮೂಲಕ ಗ್ರಾಮೀಣ ಯುವಜನರ ಸಾಮರ್ಥ್ಯವನ್ನು ಬೆಳೆಸುವ ಪ್ರಯತ್ನವಾಗಿ ಈ ಕಾರ್ಯಕ್ರಮ ಮುಂದುವರಿದಿದೆ.
ಗ್ರಾಮೀಣ ಮಕ್ಕಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ..
ಗ್ರಾಮೀಣ ಮಕ್ಕಳು ವೃತ್ತಿಪರ ಶಿಕ್ಷಣದೊಂದಿಗೆ ಈ ಸ್ಪರ್ಧಾತಕ ಯುಗದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲಿ ಎಂಬ ಉದ್ದೇಶದಿಂದ ಸುಜ್ಞಾನನಿಧಿ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ಸುಜ್ಞಾನನಿಧಿ ವಿದ್ಯಾರ್ಥಿವೇತನ ಪಡೆದು ಅನೇಕ ಗ್ರಾಮೀಣ ಪ್ರತಿಭೆಗಳು ಉನ್ನತ ಹ್ದುೆಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ.
-ಡಾ. ಡಿ. ವೀರೇಂದ್ರ ಹೆಗ್ಗಡೆರವರು,
ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ
ವಿದ್ಯಾರ್ಥಿಗಳಿಗೆ ನೆರವಾದ ವಿದ್ಯಾರ್ಥಿವೇತನ : ನನಸಾದ ಬಿಇ ಕನಸು
ನನ್ನ ಬಿ.ಇ. ಪದವಿ ಶಿಕ್ಷಣಕ್ಕೆ ಸುಜ್ಞಾನನಿಧಿ ವಿದ್ಯಾರ್ಥಿವೇತನ ನೆರವಾಗಿ ರುವುದು. ಶಿಕ್ಷಣದ
ಪಯಣ ದಲ್ಲಿ ಆರ್ಥಿಕ ನೆರವು ಅತ್ಯಂತ ಪ್ರಮುಖವಾಗಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ದೊರೆತ ಸಹಾಯವು ನನ್ನ ಬಿ.ಇ. ಪದವಿಯ ಕನಸನ್ನು ನನಸಾಗಿಸಲು ನೆರವಾಯಿತು. ನನ್ನ ಶಿಕ್ಷಣದ ಯಶಸ್ಸಿಗೆ ಕಾರಣವಾದ ನೆರವು ಮತ್ತು ಪ್ರೋತ್ಸಾಹಕ್ಕಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಹಾಗೂ ಸಂಸ್ಥೆಗೆ ಕೃತಜ್ಞತೆಗಳು.
-ವರ್ಷಾ ಜಿ.ವಿ., ದಾವಣಗೆರೆ
ಕಷ್ಟಕ್ಕೆ ಆಸರೆ “
ಬಿ.ಇ. ವಿದ್ಯಾಭ್ಯಾಸಕ್ಕಾಗಿ ಸುಜ್ಞಾನನಿಧಿ ವಿದ್ಯಾರ್ಥಿವೇತನವನ್ನು ಪ್ರತಿವರ್ಷ ಸರಿಯಾದ ಸಮಯಕ್ಕೆ ಪಡೆದಿದ್ದು, ಕಷ್ಟದ ಸಂದರ್ಭದಲ್ಲಿ ಶಿಕ್ಷಣ ಮುಂದುವರಿಸಲು ಅದು ಪ್ರೋತ್ಸಾಹ ನೀಡಿತು. ವಿದ್ಯಾರ್ಥಿವೇತನದ ನೆರವಿಗಾಗಿ ಕೃತಜ್ಞತೆಗಳು.
-ಎಂ. ನಿತಿನ್ , ಹೊಳಲ್ಕೆರೆ
186.01 ಕೋಟಿ ರೂ.ನೆರವು
2025- 26ನೇ ಶೈಕ್ಷಣಿಕ ಸಾಲಿನಲ್ಲಿ ಒಟ್ಟು 42,345 ವಿದ್ಯಾರ್ಥಿಗಳಿಗೆ 33.27 ಕೋಟಿ ವಿದ್ಯಾರ್ಥಿವೇತನ ಒದಗಿಸಲಾಗಿದೆ. ಇದುವರೆಗೆ ಒಟ್ಟು 1,37,165 ವಿದ್ಯಾರ್ಥಿಗಳಿಗೆ 186.01 ಕೋಟಿ ನೆರವು ನೀಡಲಾಗಿದೆ.
ಉನ್ನತ ಶಿಕ್ಷಣಕ್ಕೆ ಪ್ರೇರಣೆ :
ಸುಜ್ಞಾನನಿಧಿ ಕಾರ್ಯಕ್ರಮದಿಂದ ಒಬ್ಬ ಸಾಮಾನ್ಯ ಬಡ ಕುಟುಂಬದ ವಿದ್ಯಾರ್ಥಿಯೂ ಕೂಡ ಎಂಬಿಬಿಎಸ್, ಬಿಇಯಂತಹ ಉನ್ನತ ಶಿಕ್ಷಣ ಪಡೆಯಲು ಈ ಕಾರ್ಯಕ್ರಮ ಪ್ರೇರಣೆ ಯಾಗಿದೆ.
-ಅನಿಲ್ಕುಮಾರ್ ಎಸ್.ಎಸ್.
ಕಾರ್ಯನಿರ್ವಾಹಕ ನಿರ್ದೇಶಕರು
ಶ್ರೀ ಕ್ಷೇತ್ರ ಧರ್ಮಸ್ಥಳ
ಗ್ರಾಮಾಭಿವೃದ್ಧಿ ಯೋಜನೆ
ಎಂಬಿಬಿಎಸ್ ಪದವಿ ಯಶಸ್ವಿ :
ನನ್ನ ಎಂಬಿಬಿಎಸ್ ವಿದ್ಯಾಭ್ಯಾಸಕ್ಕೂ ಸುಜ್ಞಾನನಿಧಿ ವಿದ್ಯಾರ್ಥಿವೇತನ ನೆರ ವಾಗಿದ್ದು, ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಮತ್ತು ಪ್ರೋತ್ಸಾಹದಿಂದ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣ ಗೊಳಿಸಿದ್ದೇನೆ.
-ಭೂಮಿಕಾ , ಬೆಂಗಳೂರು
