Wednesday, April 29, 2026
Homeರಾಜ್ಯಲಾರಿ-ಕಾರು ನಡುವೆ ಭೀಕರ ಅಪಘಾತ, ಮೂವರು ಯುವಕರ ದುರ್ಮರಣ

ಲಾರಿ-ಕಾರು ನಡುವೆ ಭೀಕರ ಅಪಘಾತ, ಮೂವರು ಯುವಕರ ದುರ್ಮರಣ

Three youths die in horrific accident between lorry and car

ರಾಮನಗರ,ಮಾ.8- ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರು -ಕನಕಪುರ ರಸ್ತೆಯ ಅಗರ ಕ್ರಾಸ್‌‍ ಬಳಿ ಇಂದು ಮುಂಜಾನೆ ನಡೆದಿದೆ.

ಮೃತರನ್ನು ಯೂನಿಫ್‌ಖಾನ್‌ (23), ಸೈಯದ್‌ಪಾಷ (22), ಅಜರ್‌ಪಾಷ (22) ಎಂದು ಗುರುತಿಸಲಾಗಿದೆ.ಫರಾಜ್‌ ಎಂಬುವವನಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಲ್ವರು ಯುವಕರು ಕಾರಿನಲ್ಲಿ ಇಂದು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಬೆಂಗಳೂರಿನಿಂದ ಕನಕಪುರ ಕಡೆಗೆ ತೆರಳುತ್ತಿದ್ದಾಗ ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ.ಸುದ್ದಿ ತಿಳಿದ ಕೂಡಲೇ ಕಗ್ಗಲಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News