ಬಳ್ಳಾರಿ,ಜು.11- ವಿಜಯನಗರ, ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿ ಆಗಿರುವ ತುಂಗಭದ್ರಾ ಜಲಾಶಯನ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಜಲಾಶಯದ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ.
ತುಂಗಭದ್ರಾ ಜಲಾಶಯಕ್ಕೆ 44,782 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 1,633.00 ಅಡಿ ಇದ್ದು. ನಿನ್ನೆ ಜಲಾಶಯದ ನೀರಿನ ಮಟ್ಟ 1,596.66 ಅಡಿ ತಲುಪಿದೆ. ಜಲಾಶಯದ ನೀರಿನ ಸಂಗ್ರಹ ಮಟ್ಟ 17.511 ಟಿಎಂಸಿ ಗೆ ಏರಿಕೆ ಆಗಿದೆ. ಜಲಾಶಯದ ಕಾಲುವೆಗಳ ಮೂಲಕ ಮಾತ್ರ 180 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಕಳೆದ ಮೂರು ದಿನದ ಅವದಿಯಲ್ಲಿ ಜಲಾಶಯದಲ್ಲಿ 4 ಅಡಿ ನೀರು ಹೆಚ್ಚಳವಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಜಲಾಶಯದ ಒಳ ಹರಿವಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು. ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಆಗುತ್ತಿರುವುದರಿಂದ ಒಳ ಹರಿವಿನ ಪ್ರಮಾಣ ಇನ್ನು ಹೆಚ್ಚಳವಾಗಲಿದೆ ಎಂದು ತುಂಗಭದ್ರಾ ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ. ಭತ್ತಿ ಹೋಗಿದ್ದ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿರುವುದರಿಂದ ಜಲಾಶಯಕ್ಕೆ ಹೊಸ ಕಳೆ ಬಂದಂತಾಗಿದೆ.
