ಕ್ಯಾಮೆರಾ ಅಳವಡಿಸಿದ್ದ 50 ಲಕ್ಷ ಬ್ಲಾಕ್‌ಮೇಲ್ ಪ್ರಕರಣಕ್ಕೆ ಹೊಸ ತಿರುವುಸಿಕ್ಕಿದ್ದು, ಈ ದುಷ್ಕೃತ್ಯದ ಹಿಂದೆ ಇದ್ದ ಸರ್ಕಾರಿ ಅಧಿಕಾರಿಯೊಬ್ಬನ ಸಂಚು ಬಯಲಿಗೆ ಬಂದಿದೆ.ಈ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿ,ಆರೋಪಿ ವಿನೋದ್‌ಎಂಬಾತನನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿಯ ತೇಜೋವಧೆ ಮಾಡುವ ಉದ್ದೇಶದಿಂದ ರಹಸ್ಯಕ್ಯಾಮರಾ ಅಳವಡಿಸುವ ಸಂಚು ರೂಪಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಮಹಿಳಾ ಅಧಿಕಾರಿಯ ವಿರುದ್ಧ ನಕಲಿ ಯೂಟ್ಯೂಬರ್ಸ್ ಬಳಸಿ ಬ್ಲ್ಯಾಕ್‌ಮೇಲ್ ಮಾಡುವ ಯತ್ನ ನಡೆದಿದ್ದು, ಅದರಿಂದ ಬಂದ ಹಣದಲ್ಲಿ ನಕಲಿ ಪತ್ರಕರ್ತರು ಹಾಗೂ ಟಿ. ವಿನೋದ್ ಗೆ ಪಾಲು ಇತ್ತು ಎನ್ನಲಾಗಿದೆ.
ಮಹಿಳಾ ಅಧಿಕಾರಿಯ ಖಾಸಗಿ ದೃಶ್ಯಗಳನ್ನು ಸಂಗ್ರಹಿಸುವ ಉದ್ದೇಶದಿಂದ ಮನೆ ಬಲ್‌್ಬ ಹೋಲ್ಡರ್‌ಗಳಲ್ಲಿ ಒಟ್ಟು 8 ರಹಸ್ಯ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು ಎನ್ನಲಾಗಿದೆ.ಇದೇ ಮಹಿಳಾ ಅಧಿಕಾರಿ ವಿನೋದ್‌ನ ವರ್ಗಾವಣೆಗೆ ಕಾರಣರಾಗಿದ್ದ ಹಿನ್ನೆಲೆಯಲ್ಲಿ, ಸೇಡು ತೀರಿಸಿಕೊಳ್ಳಲು ಅವನು ಅಡ್ಡಮಾರ್ಗ ಹಿಡಿದಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ.ಹಿಡನ್ (ರಹಸ್ಯ) ಕ್ಯಾಮರಾ ಮೂಲಕ ವೀಡಿಯೊ ಸಂಗ್ರಹಿಸಿ ದುರ್ಬಳಕೆ ಮಾಡಿಕೊಳ್ಳುವ ಸಂಪೂರ್ಣ ಸ್ಕೇಚ್ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಮೂವರು ನಕಲಿ ಪತ್ರಕರ್ತರನ್ನು ಬಂಧಿಸಿರುವ ಪೊಲೀಸರು, ಇದೀಗ ಮಹಿಳಾ ಅಧಿಕಾರಿಯ ಕಚೇರಿಯಲ್ಲಿದ್ದ ಮತ್ತೊಬ್ಬ ಅಧಿಕಾರಿಯನ್ನೂ ವಶಕ್ಕೆ ಪಡೆದಿದ್ದಾರೆ.ಇವರೆಲ್ಲ ಮಹಿಳಾ ಅಧಿಕಾರಿ ಮನೆಗೆ ಹೇಗೆ ನುಗ್ಗಿದ್ದರು ಎಂಬ ಬಗ್ಗೆಯೂ ವಿಚಾರಣೆ ನಡೆದಿದೆ.
ಬ್ಲ್ಯಾಕ್‌ಮೇಲ್‌ನಿಂದ ಬಂದ ಹಣದಲ್ಲಿ ಮನೆ ಕಟ್ಟುವ ಯೋಜನೆಯೂ ಇತ್ತು ಎನ್ನಲಾಗಿದೆ. ಕೊನೆಗೂ ಪೊಲೀಸರ ಪ್ರಕರಣ ಹಿಂದಿನ ಸಂಚುಕೋರನನ್ನು ಖೆಡ್ಡಾಕ್ಕೆ ಬೀಳಿಸಿದ್ದಾರೆ.ಈ ಘಟನೆ ಆಡಳಿತ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
