ಕೊಚ್ಚಿ, .26-ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿನ ಮುವಾಟ್ಟುಪುಳದಲ್ಲಿ ನಡೆದಿದೆ. ಮೃತರನ್ನು ನೆರಯ ಕರ್ನಾಟಕದ ಚಾಮರಾಜನಗರ ಜಿಲ್ಲೆಯ ಪಳನಿಮೇಡುವಿನ ಮುತ್ತು ರಾಜು (29) ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಶರವಣ ಡಿ (24) ಎಂದು ಗುರುತಿಸಲಾಗಿದೆ.
ರಾಜು ಇಲ್ಲಿ ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ ರಾತ್ರಿ 11.15 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರ ತಿಳಿಸಿದ್ದಾರೆ. ಪಲ್ಲಿತಾಳಂನಲ್ಲಿ ಇಬ್ಬರು ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅಪರಿಚಿತ ವಾಹನವೊಂದು ಅವರಿಗೆ ಡಿಕ್ಕಿ ಹೊಡೆದಿದೆ ಆದರ ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.
ತೀವ್ರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದಾರೆ ಎಂದು ಪೊಲೀಸರು ಅಧಿಕಾರಿ ತಿಳಿಸಿದ್ದಾರೆ.
ಮುವಾಟ್ಟುಪುಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತವೆಸಗಿದ ವಾಹನವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದರು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹಗಳನ್ನು ಅವರ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು ಎಂದು ಮಹಿತಿ ನೀಡಿದ್ದಾರೆ.
