Homeರಾಜ್ಯಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರ ಸಾವು

ಬೆಂಗಳೂರು,ನ.7- ಅತಿ ವೇಗ ಹಾಗೂ ಅಜಾಗರೂಕತೆಯಿಂದ ಮುನ್ನುಗ್ಗಿದ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಸಂಚಾರಿ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದೆ.ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಲಿಂಗರಾಜು (28) ಮತ್ತು ದೇವರಾಜಮ (25) ಮೃತಪಟ್ಟವರು.

ಲಿಂಗರಾಜು ವೃತ್ತಿಯಲ್ಲಿ ಕ್ಯಾಬ್‌ ಚಾಲಕರಾಗಿದ್ದು, ಹೊಸಕೋಟೆಯಲ್ಲಿ ನೆಲೆಸಿದ್ದರು. ದೇವರಾಜಮ ಎಲೆಕ್ಟ್ರಾನಿಕ್‌ ಸಿಟಿಯ ಪಿಜಿಯೊಂದರಲ್ಲಿ ವಾಸವಾಗಿದ್ದಕೊಂಡು ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಇವರಿಬ್ಬರು ಶಿರಾ ತಾಲ್ಲೂಕಿನ ಅಕ್ಕಪಕ್ಕದ ಊರಿನವರಾಗಿದ್ದರಿಂದ ಪರಿಚಿತರಾಗಿದ್ದರು. ನಿನ್ನೆ ಇವರಿಬ್ಬರು ಬೈಕ್‌ನಲ್ಲಿ ಎಲ್ಲೋ ಹೋಗಿದ್ದು, ಬೆಳಗಿನ ಜಾವ 1 ಗಂಟೆ ಸುಮಾರಿನಲ್ಲಿ ವಾಪಸ್‌‍ ಆಗುತ್ತಿದ್ದರು.

ಇವರ ಬೈಕ್‌ ಬೊಮಸಂದ್ರ ಫ್ಲೈಓವರ್‌ ಮೇಲೆ ಬರುತ್ತಿದ್ದಾಗ ಯಾವುದೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಒಂದೊಂದು ಕಡೆ ಹಾರಿ ಬಿದ್ದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಸುದ್ದಿ ತಿಳಿದು ಎಲೆಕ್ಟ್ರಾನಿಕ್‌ ಸಿಟಿ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಇಬ್ಬರ ಮೃತದೇಹಗಳನ್ನು ಸೆಂಟ್‌ ಜಾನ್‌ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಪಘಾತವೆಸಗಿದ ಚಾಲಕ ಸ್ಥಳದಲ್ಲಿ ವಾಹನ ನಿಲ್ಲಿಸದೇ ಚಾಲನೆ ಮಾಡಿಕೊಂಡು ಹೋಗಿದ್ದಾನೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ವಾಹನ ಹಾಗೂ ಚಾಲಕನ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ.

RELATED ARTICLES

Latest News