Homeರಾಜ್ಯಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ

Union Minister H.D. Kumaraswamy begins Sabarimala pilgrimage

ಶಬರಿಮಲೆ,ಜೂ.15- ಕೇಂದ್ರ ಸರ್ಕಾರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಇಂದು ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಇಂದು ಬೆಳಗಿನ ಜಾವವೇ ಕೊಚ್ಚಿನ್‌ ನಗರದ ಸುಬ್ರಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅವರು, ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ನಂತರ ಇರುಮುಡಿ ಹೊತ್ತು ಶಬರಿಮಲೆಗೆ ಯಾತ್ರೆ ಹೊರಟರು.

ಮಧ್ಯಾಹ್ನದ ಹೊತ್ತಿಗೆ ಪಂಪಾನದಿ ತೀರವನ್ನು ಸೇರಿಕೊಳ್ಳುವ ಸಚಿವರು ಹಾಗೂ ಅವರೊಡನೆ ತೆರಳಿರುವ ಭಕ್ತರ ತಂಡವು, ತದನಂತರ ಪುಣ್ಯ ಸ್ನಾನ ಮಾಡಿ ಶಬರಿಮಲೆಯತ್ತ ಸಾಗಿತು.
ಸಂಜೆ ಅಯ್ಯಪ್ಪ ಸನ್ನಿಧಿಯಲ್ಲಿ ಪಡಿ ಪೂಜೆಯಲ್ಲಿ ಪಾಲ್ಗೊಳ್ಳಲಿರುವ ಸಚಿವರು ನಂತರ ಅಯ್ಯಪ್ಪ ಸ್ವಾಮಿಗೆ ಪುಷ್ಪ ಅಭಿಷೇಕದಲ್ಲಿ ಭಾಗಿಯಾಗಲಿದ್ದಾರೆ.

ಕೇಂದ್ರ ಸಚಿವರಾದ ನಂತರ ಕುಮಾರಸ್ವಾಮಿಯವರು ಶಬರಿಮಲೆಗೆ ಕೈಗೊಂಡ ಮೊದಲ ಯಾತ್ರೆ ಇದಾಗಿದೆ. ಇದಕ್ಕೂ ಮೊದಲು ಅವರು ಹಲವಾರು ಬಾರಿ ಅಯ್ಯಪ್ಪನ ಸನ್ನಿಧಿಗೆ ಯಾತ್ರೆ ಕೈಗೊಂಡಿದ್ದರು.

ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸುರೇಶ್‌ ಬಾಬು, ಮಾಜಿ ಮಂತ್ರಿಗಳಾದ ಸಿ.ಎಸ್‌‍. ಪುಟ್ಟರಾಜು, ಸಾ.ರಾ. ಮಹೇಶ್‌, ವಿಧಾನ ಪರಿಷತ್‌ ಸದಸ್ಯ ಭೋಜೇಗೌಡರು, ಶಾಸಕ ಶರಣಗೌಡ ಕಂದಕೂರ, ಮಾಜಿ ಶಾಸಕರಾದ ಮಾಗಡಿ ಮಂಜುನಾಥ್‌, ಹೆಚ್‌.ಎಂ.ರಮೇಶ್‌ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಅಯ್ಯಪ್ಪ ಭಕ್ತರ ತಂಡದೊಂದಿಗೆ ಕುಮಾಸ್ವಾಮಿಯವರು ಯಾತ್ರೆ ಕೈಗೊಂಡಿದ್ದಾರೆ.

RELATED ARTICLES

Latest News