Sunday, April 19, 2026
Homeರಾಜ್ಯವೈರಮುಡಿ ಬ್ರಹೋತ್ಸವ : ಭದ್ರತೆಗಾಗಿ 1,210 ಆರಕ್ಷಕ ಸಿಬ್ಬಂದಿ ನಿಯೋಜನೆ

ವೈರಮುಡಿ ಬ್ರಹೋತ್ಸವ : ಭದ್ರತೆಗಾಗಿ 1,210 ಆರಕ್ಷಕ ಸಿಬ್ಬಂದಿ ನಿಯೋಜನೆ

Vairamudi Brahmotsava : 1,210 police personnel deployed for security

ಮಂಡ್ಯ.ಮಾ.28- ವೈರಮುಡಿ ಬ್ರಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದ್ದು 1,210 ಆರಕ್ಷಕ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕುಮಾರ ರವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲುಕೋಟೆ ಚೆಲುವ ನಾರಾಯಣ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು ಇಂದು ಶ್ರೀವೈರಮುಡಿ ಕಿರೀಟಧಾರಣೆ ಉತ್ಸವ ನೆರವೇರಲಿದೆ.

ಶ್ರೀವೈರಮುಡಿ ಬ್ರಹೋತ್ಸವ ಸಂಬಂಧ ದೇವಾಲಯ ಮತ್ತು ಇತರೆ ಇಲಾಖೆಗಳಿಂದ ಶೀಕ್ಷೇತ್ರದಲ್ಲಿ ಕೈಗೊಳ್ಳಬೇಕಾಗಿರುವ ಪೂರ್ವಸಿದ್ಧತೆ ಮತ್ತು ಮುಂಜಾಗ್ರತಾ ಕ್ರಮಗಳ ಸಿದ್ದತಾ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಶ್ರೀವೈರಮುಡಿ ಬ್ರಹೋತ್ಸವ ಕಾರ್ಯಕ್ರಮಕ್ಕೆ ಸುಮಾರು ಎರಡು ಲಕ್ಷದಷ್ಟು ಭಕ್ತಾದಿಗಳು ಮತ್ತು ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆ ಇರುತ್ತದೆ ಎಂದು ತಿಳಿಸಿದರು.

ಮೇಲುಕೋಟೆಯ ವಲಯ ಅರಣ್ಯಾಧಿಕಾರಿಗಳ ಕಛೇರಿಯ ಎದುರಿನ ಅವರಣದಲ್ಲಿ ವಾಹನಗಳಿಗೆ ತಾತ್ಕಾಲಿವಾಗಿ ನಿಲ್ಯಾಣ ವ್ಯವಸ್ಥೆ ಮಾಡಲಾಗಿದೆ. ಪಾರ್ಕಿಂಗ್‌ ಸ್ಥಳದಿಂದ ದೇವಾಲಯದವರೆಗೆ ಓಡಾಡಲು ಎಲ್ಲಾ ಹಿರಿಯ ನಾಗರಿಕರಿಗೆ ಹಾಗೂ ಸಾರ್ವಜನಿಕರಿಗೆ ಮತ್ತು ಗರ್ಭಿಣಿಯರಿಗೆ 5 ಉಚಿತ ಮಿನಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತುರ್ತು ಅವಘಡಗಳ ನಿರ್ವಹಣೆಗಾಗಿ ಎರಡು ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಕ್ಷೇತ್ರದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತಾ ವ್ಯವಸ್ಥೆಯ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ಹೆಚ್ಚುವರಿ ಪೊಲೀಸ್‌‍ ಅಧೀಕ್ಷಕರುಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚನೆಮಾಡಲಾಗಿದೆ ಎಂದು ತಿಳಿಸಿದರು.

ಸಿ.ಸಿ.ಕ್ಯಾಮರಾಗಳ ಕಣ್ಗಾವಲು: ಕ್ಷೇತ್ರದ ಭದ್ರತೆಯ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದೇವಾಲಯ ಮತ್ತು ಗ್ರಾಮದ ಪ್ರಮುಖ ಭಾಗಗಳಾದ ಬಸ್‌‍ ನಿಲ್ದಾಣ,ವಾಹನ ಪಾರ್ಕಿಂಗ್‌,ದೊಡ್ಡ ಕಲ್ಯಾಣಿ ಬಳಿ,ದಾಸೋಹ ಭವನ, ಮುಖ್ಯ ರಸ್ತೆಗಳು,ಪೊಲೀಸ್‌‍ ಠಾಣೆ ಬಳಿ, ಚೆಲುವ ನಾರಾಯಣಸ್ವಾಮಿ ದೇವಾಲಯದ ಸುತ್ತಲು ಸುಮಾರು 40 ಶಾಶ್ವತ ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ವಾಹನ ಪಾರ್ಕಿಂಗ್‌ ಮತ್ತು ಇತರ ಕಡೆಗಳಲ್ಲಿ ಹೆಚ್ಚುವರಿ 40 ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದರು.ಏ.1 ರಂದು ವೈರಮುಡಿ ಬ್ರಹೋತ್ಸವ ಅಂಗವಾಗಿ ತೆಪ್ಪೋತ್ಸವ ಕಾರ್ಯಕ್ರಮ ನಡೆಯಲಿದ್ದು ಮೇಲುಕೋಟೆಯ ದೊಡ್ಡ ಕಲ್ಯಾಣಿಯಲ್ಲಿ ವಿಶೇಷ ವಿದ್ಯುತ್‌ ದೀಪಾಲಂಕಾರ ಮಾಡಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಆರ್‌. ನಂದಿನಿ, ಅಪರ ಜಿಲ್ಲಾಧಿಕಾರಿ ಬಿ. ಸಿ ಶಿವಾನಂದ ಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಟಿ. ಕೆ. ಹರೀಶ್‌ ರವರು ಉಪಸ್ಥಿತರಿದ್ದರು.

RELATED ARTICLES

Latest News