Monday, December 8, 2025
Homeರಾಜ್ಯವರುಣಾ ಕ್ಷೇತ್ರ ಚುನಾವಣೆ ತಕರಾರು : ಸಿಎಂ ಸಿದ್ದುಗೆ ಸುಪ್ರೀಂ ನೋಟೀಸ್

ವರುಣಾ ಕ್ಷೇತ್ರ ಚುನಾವಣೆ ತಕರಾರು : ಸಿಎಂ ಸಿದ್ದುಗೆ ಸುಪ್ರೀಂ ನೋಟೀಸ್

Varuna constituency election dispute: Supreme Court notice to CM Siddaramaiah

ನವದೆಹಲಿ, ಡಿ. 8 (ಪಿಟಿಐ)- ಕಳೆದ 2023 ರ ರಾಜ್ಯ ಚುನಾವಣೆಯಲ್ಲಿ ವರುಣಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ಇಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಂದ ಪ್ರತಿಕ್ರಿಯೆ ಕೋರಿದೆ.

ಕೆ ಶಂಕರ ಎಂಬವರು ಸಲ್ಲಿಸಿದ್ದ ಅರ್ಜಿಯ ಕುರಿತು ಉತ್ತರ ನೀಡುವಂತೆ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಸಿದ್ದರಾಮಯ್ಯ ಅವರಿಗೆ ನೋಟೀಸ್ ಜಾರಿ ಮಾಡಿದೆ.

ವರುಣಾ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ನ ಏಪ್ರಿಲ್ 22 ರ ಆದೇಶವನ್ನು ಪ್ರಶ್ನಿಸಿ ಶಂಕರ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಜನತಾ ಪ್ರಾತಿನಿಧ್ಯ ಕಾಯ್ದೆ, 1951 ರ ನಿಬಂಧನೆಯ ಅಡಿಯಲ್ಲಿ ಸಿದ್ದರಾಮಯ್ಯ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.ಶಂಕರ ಅವರ ಚುನಾವಣಾ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು.

RELATED ARTICLES

Latest News