ಬೆಂಗಳೂರು,ಮಾ.6- ಉನ್ನತ ವ್ಯಾಸಂಗ ಮಾಡುವ ಹಾಗೂ ಸ್ಪರ್ಧಾತಕ ಪರೀಕ್ಷೆಗಳ ಸಿದ್ಧತೆ ಮಾಡಿಕೊಳ್ಳುವ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಈ ಭರವಸೆ ನೀಡಿರುವ ಅವರು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್‌ಗಳು ಹಾಗೂ ಧಾರವಾಡದಲ್ಲಿ ನಾಲ್ಕು ಕ್ಯಾಂಟೀನ್‌ಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ನಗರ ಪ್ರದೇಶಗಳ ಆಯ್ದ ಪ್ರದೇಶಗಳಲ್ಲಿ ಹಸಿರು ವಲಯ ಹೆಚ್ಚಿಸಲು 100 ಮಿಯವಾಕಿ ಪಾರ್ಕ್‌ಗಳನ್ನು ನಿರ್ಮಿಸಲಾಗುತ್ತಿದೆ ಹಾಗೂ ಸ್ಥಳೀಯ ಸಂಸ್ಥೆಗಳ ನಿರ್ವಹಣೆ ಸರಳಗೊಳಿಸಲು ದಿ ಎಸ್ಟೇಟ್ ಮ್ಯಾನೆಜ್‌ಮೆಂಟ್ ರೂಲ್‌್ಸ ಜಾರಿಗೊಳಿಸಲಾಗುವುದು ಎಂದು ಅವರು ಹೇಲಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಏಕೀಕೃತ ಆಸ್ತಿ ತೆರಿಗೆ ತಂತ್ರಾಂಶ ಸಂಯೋಜನೆ ಮಾಡಿ ತೆರಿಗೆ ಬೇಡಿಕೆ ಮತ್ತು ಬಾಕಿ ವಿವರಗಳನ್ನು ಸ್ವಯಂಚಾಲಿತವಾಗಿ ಸೃಜಿಸುವ ಯುನಿಫೈಡ್ ಪ್ರಾಪರ್ಟಿ ಟ್ಯಾಕ್‌್ಸ ವ್ಯವಸ್ಥೆ ಜಾರಿಗೊಳಿಸಲಾಗುವುದು.
ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನ ಯೋಜನೆ -4 ಅಡಿಯಲ್ಲಿ 3885 ಕೋಟಿ ರೂ. ವೆಚ್ಚದಲ್ಲಿ ಮೌಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಸಿಎಂ ತಿಳಿಸಿದ್ದಾರೆ.
