Homeರಾಜ್ಯಒಬ್ಬನೇ ವ್ಯಕ್ತಿಗೆ ಎಡರು ಕಡೆ ವೋಟರ್‌ ಐಡಿ

ಒಬ್ಬನೇ ವ್ಯಕ್ತಿಗೆ ಎಡರು ಕಡೆ ವೋಟರ್‌ ಐಡಿ

ಬೆಂಗಳೂರು, ಅ.28- ರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪರಿಷ್ಕರಣೆ (ಎಸ್‌‍ಐಆರ್‌) ಪ್ರಕ್ರಿಯೆ ಪೂರ್ಣಗೊಂಡ ನಂತರವೂ ಒಬ್ಬ ವ್ಯಕ್ತಿಯ ಹೆಸರು ಎರಡು ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ, ಒಬ್ಬ ವ್ಯಕ್ತಿಯ ಹೆಸರು ಕರ್ನಾಟಕ ಮತ್ತು ಬಿಹಾರ ಎರಡೂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ಇರುವುದಾಗಿ ಹೇಳಲಾಗುತ್ತಿರುವ ಪ್ರಕರಣವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿರುವ ಉದಯ್‌ ಕುಮಾರ್‌ ಎಂಬ ವ್ಯಕ್ತಿಯ ಹೆಸರು, ಅದೇ ಹೆಸರು ಮತ್ತು ಒಂದೇ ರೀತಿಯ ವೈಯಕ್ತಿಕ ಮಾಹಿತಿಯೊಂದಿಗೆ ಬಿಹಾರದಲ್ಲೂ ಕಾಣಿಸಿಕೊಂಡಿದೆ ಎಂಬ ಮಾಹಿತಿ ಮುನ್ನೆಲೆಗೆ ಬಂದಿದೆ.

ಬಿಹಾರದ ನಾವಡ ಜಿಲ್ಲೆಯ ಹಿಸೌ ಕ್ಷೇತ್ರದಲ್ಲೂ ಹೆಸರು!:ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಉದಯ್‌ ಕುಮಾರ್‌ ಅವರ ಹೆಸರು ಬಿಹಾರದ ನಾವಡ ಜಿಲ್ಲೆಯ ಹಿಸೌ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲೂ ಇದೆ ಎಂದು ಹೇಳಲಾಗುತ್ತಿದೆ. ಒಂದೇ ವ್ಯಕ್ತಿಗೆ ಎರಡು ರಾಜ್ಯಗಳಲ್ಲಿ ಮತದಾನದ ಹಕ್ಕು ಲಭ್ಯವಾಗಿದೆಯೇ ಎಂಬ ಪ್ರಶ್ನೆ ಇದೀಗ ಉದ್ಭವಿಸಿದೆ.

ಕರ್ನಾಟಕದ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೇ ಈ ಮಾಹಿತಿ ಮುನ್ನೆಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಬಿಹಾರದಲ್ಲಿ 2025ರಲ್ಲೇ ಪ್ರಕ್ರಿಯೆ ಪೂರ್ಣಗೊಂಡಿತ್ತು. ಇದೀಗ ಕರ್ನಾಟಕದ ಮತದಾರರ ಪಟ್ಟಿಯಲ್ಲೂ ಅದೇ ವ್ಯಕ್ತಿಯ ಹೆಸರು ಕಾಣಿಸಿಕೊಂಡಿರುವುದಾಗಿ ಹೇಳಲಾಗುತ್ತಿರುವುದು ಮತದಾರರ ಪಟ್ಟಿ ಪರಿಷ್ಕರಣೆಯ ವಿಶ್ವಾಸಾರ್ಹತೆ ಮತ್ತು ಪರಿಶೀಲನಾ ಪ್ರಕ್ರಿಯೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

RELATED ARTICLES

Latest News