Homeರಾಜ್ಯಯೋಗೀಶ್ ಗೌಡ ಕೊಲೆ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ಯೋಗೀಶ್ ಗೌಡ ಕೊಲೆ ಪ್ರಕರಣ : ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

ನವದೆಹಲಿ. 27- ತೀವ್ರ ಕುತೂಹಲ ಕೆರಳಿಸಿದ್ದ ಶಾಸಕ ವಿನಯ್ ಕುಲಕರ್ಣಿ ಅವರ ಮೇಲಿನ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ತೀರ್ಪನ್ನು ಕಾಯ್ದಿರಿಸಿದೆ.

ಈ ಹಿಂದೆ ವಿಚಾರಣಾ ನ್ಯಾಯಾಲಯ ಅಪರಾಧಿ ಎಂದು ಘೋಷಿಸಿ ಶಿಕ್ಷೆ ನೀಡಿದ ಬಳಿಕ ಅದನ್ನು ರಾಜ್ಯ ಹೈಕೋರ್ಟ್ ತಡೆ ನೀಡಿತ್ತು, ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು.

ಇಂದು ಸುಧೀರ್ಘವಾಗಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಂತಿಮವಾಗಿ ತೀರ್ಪನ್ನು ಕಾಯ್ದಿಸಿದೆ. ಇದೆ ವೇಳೆ ನ್ಯಾಯಮೂರ್ತಿಗಳು ರಾಜಕೀಯ ಕೊಲೆಗಳನ್ನ ಸಹಿಸಲು ಸಾಧ್ಯವಿಲ್ಲ ಅಂತಹ ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಬೇಕು ಎಂಬ ಅಭಿಪ್ರಾಯ ಪಟ್ಟಿದೆ.

RELATED ARTICLES

Latest News