ಬೆಂಗಳೂರು : ರಾಜ್ಯದಾದ್ಯಂತ ಭಾರೀ ಸಂಚಲಮ ಸೃಷ್ಟಿಸಿದ್ದ ಧಾರವಾಡ ಜಿಲ್ಲೆ ಹೆಬ್ಬಳ್ಳಿ ಕ್ಷೇತ್ರದ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದ ಆಪರಾಧಿಗಳಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಆತ್ಯಾಚಾರ ಪ್ರಕರಣದಲ್ಲಿ ಈಗಾಗಲೇ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ಚಲ್ ರೇವಣ್ಣ ನಂತರ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಎರಡನೇ ಜನಪ್ರತಿನಿಧಿ ವಿನಯ್ ಕುಲಕರ್ಣಿ ಅವರಾಗಿದ್ದಾರೆ. ನ್ಯಾಯಾಲಯವು ಜೀವವಾಧಿ ಶಿಕ್ಷೆ ವಿಧಿಸಿರುವ ಕಾರಣ ಅವರ ಶಾಸಕ ಸ್ಥಾನವು ತಕ್ಷಣದಿಂದಲೇ ಆನರ್ಹಗೊಂಡಿದೆ.
ಅಪರಾಧಿಗಳಿಗೆ ಐಪಿಸಿ ಸೆಕ್ಷನ್ 302(ಕೊಲೆ) ಅಡಿಯಲ್ಲಿ ಜೀವಾವಧಿ ಶಿಕ್ಷೆ ಮತ್ತು ಸೆಕ್ಷನ್ 120(ಬಿ) (ಕೊಲೆಗೆ ಪಿತೂರಿ) ಅಡಿಯಲ್ಲಿ 7 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ. ಎರಡೂ ಶಿಕ್ಷೆಗಳನ್ನು ಏಕಕಾಲಕ್ಕೆ ಅನುಭವಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಕಿಕ್ಕಿರಿದು ತುಂಬಿದ್ದ ನ್ಯಾಯಾಲಯದ ಆವರಣದಲ್ಲಿ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ ಗಜನನ ಭಟ್ ಅವರು, ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿ ಪ್ರಕರಣದಲ್ಲಿ ಭಾಗಿಯಾಗಿದ್ದ 17 ಆಪರಾಧಿಗಳ ಪೈಕಿ 16 ಆಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿ ಆದೇಶ ನೀಡಿದರು. ಪ್ರಕರಣದ 19 ನೇ ಆಪರಾಧಿ ಚನ್ನಕೇಶವ ಟಿಂಗರಿಕರ್ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ.
ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ.ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ.
ಇನ್ನು ಪ್ರಕರಣದ 20 ವಾಸುದೇವ ನಿಲೇಕಣಿ, 21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು. ನ್ಯಾಯಮೂರ್ತಿಗಳ ಆದೇಶ ಹೊರಬೀಳುತ್ತಿದ್ದಂತೆ ಕಟಕಟೆಯಲ್ಲಿ ನಿಂತಿದ್ದ ಎಲ್ಲರೂ ಒಂದು ಕ್ಷಣ ಅಲ್ಲಿಯೇ ಕಣ್ಣಿ?ರು ಹಾಕಿದರು. ನಂತರ ಎಲ್ಲರನ್ನು ಭಾರೀ ಬಿಗಿ ಭದ್ರತೆ ನಡುವೆ ಸಿಬಿಐ ಅಧಿಕಾರಿಗಳು ಪರಪ್ಪನ ಆಗ್ರಹಾರ ಜೈಲಿಗೆ ಕರೆದೊಯ್ದರು.
ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಮೇಲೆ ಕ್ರಿಮಿನಲ್ ಪಿತೂರಿ (120ಬಿ) ಮತ್ತು ಕೊಲೆ (302) ಆರೋಪಗಳು ಸಾಬೀತಾಗಿತ್ತು. ಯೋಗೀಶ್ ಗೌಡ ಕೊಲೆಗೆ ಕ್ರಿಮಿನಲ್ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 120ಬಿ ಅಡಿ ಅಪರಾಧಿಗಳು ಎಂದು ನ್ಯಾಯಾಲಯ ತೀರ್ಪು ನೀಡಿತ್ತು.
ಐಪಿಸಿ ಸೆಕ್ಷನ್ 201 ಜೊತೆಗೆ 120ಬಿ ಜೊತೆಗೆ 149 ಅಡಿ ಅಪರಾಧಿಗಳು ನ್ಯಾಯಾಲಯ ತೀರ್ಮಾನಿಸಿದೆ. 19ನೇ ಆರೋಪಿ ಚನ್ನಕೇಶವ ಟಿಂಗರಿಕರ್ ಐಪಿಸಿ ಸೆಕ್ಷನ್ 218 ಜೊತೆಗೆ 120 ಬಿ ಜೊತೆಗೆ 149 ಅಡಿ ಅಪರಾಧಿ ಎಂದು ಸಾರಲಾಗಿತ್ತು.
ವಿನಯ್ ಕುಲಕರ್ಣಿ ಮತ್ತು ಚಂದ್ರಶೇಖರ್ ಇಂಡಿ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ಗಳಾದ 3, 5, 8, 25 ಮತ್ತು 29ರ ಅಡಿ ಅಪರಾಧದಿಂದ ಅವರನ್ನು ಖುಲಾಸೆಗೊಳಿಸಲಾಗಿದೆ. 20ನೇ ಆರೋಪಿ ವಾಸುದೇವ ರಾಮ ನಿಲೇಕಣಿ ಮತ್ತು 21ನೇ ಆರೋಪಿ ಸೋಮಶೇಖರ್ ಬಸಪ್ಪ ನ್ಯಾಮಗೌಡ ಅವರಿಗೆ ಅನುಮಾನದ ಲಾಭ ನೀಡಿ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಲಾಗಿತ್ತು.
ಅಪ್ರೂಪರ್ನಿಂದ ಬದಲಾಗಿ ಸಾಕ್ಷಿಯಾಗಿದ್ದ ಆನಂತರ ಪ್ರತಿಕೂಲ ಸಾಕ್ಷಿಯಾಗಿ ಬದಲಾಗಿದ್ದ ಶಿವಾನಂದ ಶ್ರೀಶೈಲ ಬಿರಾದರ್ನನ್ನು ಪ್ರಾಸಿಕ್ಯೂಷನ್ಗೆ ಒಳಪಡಿಸಲು ಅಗತ್ಯ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ನ್ಯಾಯಾಲಯವು ಪ್ರಾಸಿಕ್ಯೂಷನ್ಗೆ ನೀಡಿದೆ. ಅಲ್ಲದೇ, ಸಾಕ್ಷಿಗಳಾಗಿದ್ದ ಪೆÇಲೀಸ್? ಅಧಿಕಾರಿಗಳಾದ ಶಿವಾನಂದ ಚಲವಾದಿ, ಬಾಬು ಕಟಗಿ, ಶಂಕರಗೌಡ ಬಸನಗೌಡ ಪಾಟೀಲ್ ಮತ್ತು ಇತರೆ ಸ್ವತಂತ್ರ ಸಾಕ್ಷಿಗಳಾದ ಡಾ. ದತ್ತಾತ್ರೇಯ ಗುಡಗಂಟಿ, ಆನಂದ ಈರಪ್ಪ ಉದ್ದಣ್ಣವರ್, ವಿನಾಯಕ ಬಿಂಜಿಯವರ್, ಮೋಹನ್ ಈಚರಪ್ಪ ಮುಲ್ಮುಟ್ಟಳ್, ವಿವೇಕಾನಂದ ದಳವಾಯಿ, ನಟರಾಜ್ ಸರದೇಸಾಯಿ ಮತ್ತು ವಿಜಯ್ ಕುಲಕರ್ಣಿ ಅವರು ಸುಳ್ಳು ಸಾಕ್ಷಿ ಹೇಳಿದ್ದಕ್ಕಾಗಿ ಅವರ ವಿರುದ್ಧ ಸಿಆರ್ಪಿಸಿ ಸೆಕ್ಷನ್ 340ರ ಅಡಿ ಪ್ರಕರಣ ದಾಖಲಿಸಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ಗೆ ನ್ಯಾಯಾಲಯ ನಿರ್ದೇಶಿಸಿತ್ತು.
ಪ್ರಕರಣದ ಹಿನ್ನೆಲೆ:
2016ರ ಜೂನ್ 15ರಂದು ಧಾರವಾಡ ಉಪನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ಯೋಗೀಶ್ ಗೌಡ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆ ನಡೆಸಿದ್ದು, ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್120(ಃ) ಜೊತೆಗೆ 302, 217, 201, 143, 147, 148 ಜೊತೆಗೆ 149, ಶಸ್ತ್ರಾಸ್ತ್ರ ಕಾಯಿದೆ ಸೆಕ್ಷನ್ 25 ಜೊತೆಗೆ 3, 5, 8, 29 ಮತ್ತು ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್ 13(2) ಜೊತೆಗೆ 13(1)(ಜ) ಅಡಿ ಆರೋಪ ಪಟ್ಟಿ ಸಲ್ಲಿಸಿತ್ತು.
2020ರ ನವೆಂಬರ್ 5ರಂದು ವಿನಯ್ ಕುಲಕರ್ಣಿಯನ್ನು ಸಿಬಿಐ ಬಂಧಿಸಿತ್ತು. 2021ರ ಆಗಸ್ಟ್ 11ರಂದು ಸುಪ್ರಿ?ಂ ಕೋರ್ಟ್ ವಿನಯ್ ಕುಲಕರ್ಣಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. 2025ರ ಜೂನ್ 7ರಂದು ಸುಪ್ರಿ?ಂ ಕೋರ್ಟ್ ವಿಚಾರಣೆ ನಡೆಯುತ್ತಿರುವಾಗ ವಿನಯ್ ಕುಲಕರ್ಣಿ ಅವರು ಸಾಕ್ಷಿಗಳನ್ನು ಸಂಪರ್ಕಿಸಲು ಅಥವಾ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂಬುದಕ್ಕೆ ವಿಶ್ವಾಸಾರ್ಹ ಪುರಾವೆಗಳಿವೆ ಎಂದು ಹೇಳಿ, ಜಾಮೀನು ರದ್ದುಗೊಳಿಸಿತ್ತು.
ಏನೇನಾಗಿತ್ತು?
ಬಿಜೆಪಿಯಿಂದ ಜಿಪಂ ಸದಸ್ಯನಾಗಿದ್ದ ಯೋಗೇಶಗೌಡ ರಾಜಕೀಯವಾಗಿ ಹಂತ ಹಂತವಾಗಿ ಬೆಳೆಯುತ್ತಿದ್ದ. ಇದನ್ನು ಆಗ ಮಂತ್ರಿಯಾಗಿದ್ದ ವಿನಯ್ ಕುಲಕರ್ಣಿಗೆ ಸಹಿಸಲು ಆಗದೇ ಮುಂದೆ ತಮ್ಮ ರಾಜಕೀಯ ಎದುರಾಳಿಯಾಗಬಹುದು ಎಂದು ದ್ವೇಷ ಸಾಧಿಸುತ್ತಿದ್ದರಂತೆ. 2016ರ ಜೂನ್ 15ರಂದು ಧಾರವಾಡದ ಸಪ್ತಾಪುರ ಬಡಾವಣೆಯ ತಮ್ಮದೇ ಮಾಲೀಕತ್ವದ ಉದಯ್ ಜಿಮ್ನಲ್ಲಿ ಯೋಗೇಶಗೌಡ ಅವರ ಹತ್ಯೆ ನಡೆದಿತ್ತು. ಇದೊಂದು ಜಮೀನಿನ ವಿವಾದದ ಪ್ರಕರಣವೆಂದು ಪೊಲೀಸರು ತನಿಖೆ ನಡೆಸಿ ಎರಡೇ ದಿನದಲ್ಲಿ ಆರೋಪಿಗಳನ್ನು ಬಂಧಿಸಿದ್ದರು.
ಇದು ರಾಜಕೀಯ ದ್ವೇಷದಿಂದ ಆದಂತಹ ಕೊಲೆ ಸಿಬಿಐಗೆ ವಹಿಸಿ ಎಂದು ಯೋಗೇಶಗೌಡ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದರು. 2018ರ ವರೆಗೂ ಇದೇ ಆಗಿತ್ತು. ಮುಂದೆ ರಾಜ್ಯದ ಕಾಂಗ್ರೆಸ್ ಸರ್ಕಾರ ಬದಲಾಗಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಬಳಿಕ ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಮೊದಲು ತನಿಖೆ ಮಾಡಿ ಪ್ರಕರಣದ ದಿಕ್ಕನೇ ತಪ್ಪಿಸಿದ್ದ ಪೊಲೀಸ್ ಅಧಿಕಾರಿಗಳೂ ವಿಚಾರಣೆ ಎದುರಿಸಿದ್ದರು. ಆರೋಪಿಗಳೂ ಆಗಿದ್ದು ಈ ಪ್ರಕರಣದ ವಿಶೇಷ.
ಜೀವಾವಧಿ ಶಿಕ್ಷೆಗೆ ಗುರಿಯಾದ ಅಪರಾಧಿಗಳು
ಎ2 ವಿಕ್ರಮ್
ಎ3 ಕೀರ್ತಿ ಕುಮಾರ್
ಎ 4 ಸಂದೀಪ್
ಎ5 ವಿನಾಯಕ್
ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ
ಎ 7 ಸಂತೋಷ್
ಎ 8 ದಿನೇಶ್
ಎ 9 ಅಶ್ವಥ್
ಎ10 ಸುನಿಲ್
ಎ 11 ನಜೀರ್ ಅಹಮದ್
ಎ 12 ಷಾನವಾಜ್
ಎ 13 ನೂತನ್
ಎ14 ಹರ್ಷಿತ್
ಎ15 ವಿನಯ್ ಕುಲಕರ್ಣಿ
ಎ 16 ಚಂದ್ರು ಮಾಮ
ಎ18 ವಿಕಾಸ್ ಕಲಬುರ್ಗಿ,
ಎ 19 ಚನ್ನಕೇಶವ ಟಿಂಗರಿಕರ್ ( 7 ವರ್ಷ ಜೈಲು ಹಾಗೂ 30 ಸಾವಿರ ದಂಡ )
