Homeರಾಜ್ಯದಸರಾದ ಪ್ರಮುಖ ಆಕರ್ಷಣೆಗಳಲ್ಲೊಂದಾದ 'ಯುವ ಸಂಭ್ರಮ'ಕ್ಕೆ ಇಂದು ಚಾಲನೆ

ದಸರಾದ ಪ್ರಮುಖ ಆಕರ್ಷಣೆಗಳಲ್ಲೊಂದಾದ ‘ಯುವ ಸಂಭ್ರಮ’ಕ್ಕೆ ಇಂದು ಚಾಲನೆ

ಮೈಸೂರು,ಸೆ.28- ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೀಯವಾದ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಇಂದು ಸಂಜೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ನಗರದ ಮಾನಸಗಂಗೋತ್ರಿ ಬಯಲು ರಂಗಮಂದಿರದಲ್ಲಿ ಇಂದಿನಿಂದ ಎಂಟು ದಿನಗಳ ಕಾಲ ನಡೆಯುವ ಯುವ ಸಂಭ್ರಮಕ್ಕೆ ಸಂಜೆ 5 ಗಂಟೆಗೆ ಸಚಿವರು ಹಸಿರು ನಿಶಾನೆ ತೋರಲಿದ್ದಾರೆ. ನಾಡಿನ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದು, ಪ್ರತಿ ದಿನ ಸಂಜೆ ನೃತ್ಯ, ಸಂಗೀತ, ನಾಟಕ ಸೇರಿದಂತೆ ವಿವಿಧ ಕಲಾ ಪ್ರದರ್ಶನಗಳು ನಡೆಯಲಿವೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ನಟ-ನಟಿಯರು, ಹಿನ್ನಲೆ ಗಾಯಕರು ಭಾಗವಹಿಸಲಿದ್ದಾರೆ. ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ದಸರಾ ಉತ್ಸವ ಸಮಿತಿ ಪ್ರತೀ ವರ್ಷ ಯುವ ದಸರಾ ಸಂಭ್ರಮವನ್ನು ಆಯೋಜಿಸುತ್ತಿದ್ದು, ಈ ಬಾರಿಯೂ ಸಹ ಅದರಂತೆ ಕಾರ್ಯಕ್ರಮ ಆಯೋಜಿಸಿದ್ದು, ಹೆಚ್ಚಿನ ಮೆರುಗು ದೊರೆಯಲಿದೆ.

RELATED ARTICLES
spot_img

Latest News