Sunday, July 21, 2024
Homeರಾಜ್ಯಸಿಎಂ - ಡಿಸಿಎಂ ಹುದ್ದೆಗಳ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಸ್ಥಗಿತವಾಗಿದೆ : ಶೋಭಾ ಕರಂದ್ಲಾಜೆ

ಸಿಎಂ – ಡಿಸಿಎಂ ಹುದ್ದೆಗಳ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಸ್ಥಗಿತವಾಗಿದೆ : ಶೋಭಾ ಕರಂದ್ಲಾಜೆ

ಬೆಂಗಳೂರು,ಜು.7- ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ನಡುವಿನ ಹುದ್ದೆ ಸಂಬಂಧಿತ ಜಗಳದಿಂದ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತ ಗೊಂಡಿವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದರು.

ಶೇಷಾದ್ರಿಪುರದ ಗೋಲ್ಡನ್ ಮೆಟ್ರೋ ಹೋಟೆಲ್ ನಲ್ಲಿ ಕರ್ನಾಟಕ ಮೆಮೊರಿ ಚಾಂಪಿಯನ್ಶಿಪ್ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಟೀಕಿಸಿದರು.

ಝೀಕಾ ಕೂಡ ಸಂಕಷ್ಟ ತಂದೊಡ್ಡುತ್ತಿದೆ. ಇದರ ಕುರಿತು ಮುಂದಿನ ಅಧಿವೇಶನದಲ್ಲಿ ಚರ್ಚೆ ನಡೆಸಲಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ಬಿಲ್ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ ಎಂದು ಅವರು ಆಕ್ಷೇಪಿಸಿದರು.

RELATED ARTICLES

Latest News