#ಬಜೆಟ್ ಹೈಲೈಟ್ಸ್ : ರಾಜ್ಯಗಳಿಗೆ ಒಂದು ಲಕ್ಷ ಕೋಟಿ ಬಡ್ಡಿರಹಿತ ಸಾಲ

Social Share

ನವದೆಹಲಿ,ಫೆ.1-ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೂ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, ಬಂಡವಾಳ ಹೂಡಿಕೆ ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯಗಳಿಗೆ 1 ಲಕ್ಷ ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ನೀಡಲು ತೀರ್ಮಾನಿಸಿದೆ.
ಆಯಾ ರಾಜ್ಯಗಳ ಬಂಡವಾಳ ಹೂಡಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಸಕ್ತ ಸಾಲಿನಲ್ಲಿ ಬಡ್ಡಿರಹಿತ ಸಾಲ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೇಶದ ಎಲ್ಲಾ ರಾಜ್ಯಗಳ ಆರ್ಥಿಕತೆ ಉತ್ತೇಜನ ದೃಷ್ಟಿಯಿಂದ 50 ವರ್ಷಗಳ ಅವಗೆ ಒಂದು ಲಕ್ಷ ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಣೆ ನೀಡಿದ್ದಾರೆ.
ಕೇಂದ್ರ ಸರ್ಕಾರ ನೀಡುವ ಈ ವಿಶೇಷ ಅನುದಾನವನ್ನು ಬಂಡವಾಳವನ್ನಾಗಿ ಮಾಡಿಕೊಂಡು ಆಯಾ ರಾಜ್ಯಗಳು ಅರ್ಥಿಕವಾಗಿ ಸದೃಢಗೊಳ್ಳಬಹುದಾಗಿದೆ ಎಂದು ಸೀತಾರಾಮನ್ ಭರವಸೆ ವ್ಯಕ್ತಪಡಿಸಿದ್ದಾರೆ.

Articles You Might Like

Share This Article