Saturday, September 14, 2024
Homeರಾಜ್ಯರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಆ.18- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿಂದು ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟು ಮಾಡಬಹುದು. ಈ ನಿಟ್ಟಿನಲ್ಲಿ ಬಹಳ ಎಚ್ಚರಿಕೆ ವಹಿಸುವಂತೆಯೂ ಸೂಚಿಸಲಾಗಿದೆ. ನಾವು ಮಹಾತಗಾಂಧಿಜೀಯವರ ಅಹಿಂಸಾ ತತ್ವವನ್ನು ಪಾಲನೆ ಮಾಡುತ್ತೇವೆ. ಅದೇ ಮಾದರಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಈ ಪ್ರತಿಭಟನೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಸಂದೇಶ ರವಾನಿಸಲು ಯತ್ನಿಸುತ್ತೇವೆ ಎಂದರು.

ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಯುತ್ತಿದೆ. ಇಲ್ಲದೆ ಇರುವ ವಿವಾದವನ್ನು ಸೃಷ್ಟಿಸಿ, ದೊಡ್ಡ ಸರ್ಕಾರವನ್ನು ಪತನಗೊಳಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ಷೇಪಿಸಿದ ಅವರು, ಅಖಿಲ ಭಾರತ ಮಟ್ಟದಲ್ಲಿ ಇದೇ ವಿಚಾರವಾಗಿ ಪ್ರತಿಭಟನೆ ನಡೆಸುವ ಬಗ್ಗೆ ನಮಗೆ ಮಾಹಿತಿ ಇಲ್ಲ. ರಾಜ್ಯದ ಪಕ್ಷದ ವಿಚಾರವಾಗಿ ನಾನು ಮಾತನಾಡಬಲ್ಲೆ ಎಂದು ತಿಳಿಸಿದರು.

ಪ್ರಕರಣದ ಬೆಳವಣಿಗೆ ಹಾಗೂ ವಾಸ್ತವಾಂಶಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡುವುದು ನಮ ಜವಾಬ್ದಾರಿ. ಅದಕ್ಕಾಗಿ ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.

ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ:
ತುಂಗಾಭದ್ರಾ ಅಣೆಕಟ್ಟೆಯಲ್ಲಿ ಹೊಡೆದು ಹೋಗಿದ್ದ 19ನೇ ಕ್ರಸ್ಟ್ ಗೇಟ್ ಅಳವಡಿಕೆಯನ್ನು ಬಹಳ ಚೆನ್ನಾಗಿ ಮಾಡಿದ್ದಾರೆ. ಯಶಸ್ಸಿ ಕಾರ್ಯಾಚರಣೆ ನಡೆಸಿದ ಎಲ್ಲರನ್ನು ಕರೆಸಿ ಮುಂದಿನ ದಿನಗಳಲ್ಲಿ ನಾವು ಸನಾನ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ-ಜೆಡಿಎಸ್ನವರು ಗೇಟ್ ವಿಚಾರವಾಗಿ ಮಾಡಿದ ಟೀಕೆಗಳಿಗೆ ಉತ್ತರವಾಗಿ ನಮ ಕೆಲಸ ಯಶಸ್ವಿಯಾಗಿದೆ. ವಿರೋಧ ಪಕ್ಷಗಳ ಮುಖಂಡರಾದ ಗೋವಿಂದ ಕಾರಜೋಳ, ಆರ್.ಅಶೋಕ್, ಬಸವರಾಜ ಬೊಮಾಯಿ, ವಿಜಯೇಂದ್ರ, ಹೆಚ್.ಡಿ.ಕುಮಾರಸ್ವಾಮಿ ಅವರು ಮಾಡಿದ ಟೀಕೆಗಳಿಗೆ ಸಾಕ್ಷಿಯಾಗಿ ಗೇಟ್ ಅಳವಡಿಕೆ ಕೆಲಸ ಯಶಸ್ವಿಯಾಗಿದೆ ಎಂದು ತಿರುಗೇಟು ನೀಡಿದರು.

ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದು ನಾನು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗಲೂ ಹೇಳುತ್ತೇನೆ, ಮುಂದೆಯೂ ಹೇಳುತ್ತೇನೆ ಎಂದರು.

RELATED ARTICLES

Latest News