ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್

ಬೆಂಗಳೂರು,ಆ.17– ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ಪೂರ್ವಾನುಮತಿ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ದು, ರಾಜ್ಯಪಾಲರ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ದಿಢೀರ್ ಪ್ರತಿಭಟನೆಗಳು ನಡೆದಿವೆ. ಬೆಂಗಳೂರಿನ ರಾಜಭವನದ ಎದುರು ಕಾರ್ಯಕರ್ತರು ಆಗಮಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಅವರನ್ನು ನಿಯಂತ್ರಿಸಲು ಹರಸಾಹಸ ನಡೆಸಬೇಕಾಯಿತು. ಪ್ರತಿಭಟನಾಕಾರರು ರಾಜ್ಯಪಾಲರು ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಜೊತೆಗೆ ಬಿಜೆಪಿ ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ಕಾರ್ಯಕರ್ತರು … Continue reading ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ, ಬಿಗಿ ಪೊಲೀಸ್ ಬಂದೋಬಸ್ತ್