Friday, December 1, 2023
Homeರಾಜ್ಯಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ

ಶಿವಮೊಗ್ಗ ಗಲಾಟೆಗೆ ಸಂಬಂಧಿಸಿದಂತೆ 43 ಮಂದಿ ಬಂಧನ : ಸಿಎಂ

ಬೆಂಗಳೂರು,ಅ.2- ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದಿರುವ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದ್ದು, ಪರಿಸ್ಥಿತಿ ತಹಬದಿಯಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈದ್‍ಮಿಲಾದ್ ಮೆರವಣಿಗೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಕಲ್ಲುತೂರಾಟ ನಡೆಸಿದ್ದಾರೆ. ಈ ಪ್ರದೇಶ ಶಿವಮೊಗ್ಗದ ಹೊರವಲಯದಲ್ಲಿದೆ.

ಪೊಲೀಸರ ಮೇಲೂ ಕಲ್ಲುತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್ ನಡೆಸಲಾಗಿದೆ. ಘಟನೆಗೆ ಸಂಬಂಧಪಟ್ಟಂತೆ 43 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವುದು ಕಾನೂನು ಬಾಹಿರವಾದ ಕೃತ್ಯ. ಇಂತಹುದನ್ನು ನಿಯಂತ್ರಿಸಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ.

ಪೊಲೀಸ್ ಸಿಬ್ಬಂದಿಗಳಿಂದಲೇ ಯುವತಿಗೆ ಲೈಂಗಿಕ ಕಿರುಕುಳ

ಸದ್ಯಕ್ಕೆ ಶಿವಮೊಗ್ಗದ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೆಚ್ಚಿನ ಬಿಗಿ ಭದ್ರತೆ ಒದಗಿಸಿದ್ದಾರೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News