ಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ, ಜೂ.5- ಕ್ಷೇತ್ರದ ಶಾಸಕ ಪ್ರದೀಪ್‌ ಈಶ್ವರ್‌ ಅವರ ಚಿಕ್ಕಬಳ್ಳಾಪುರದ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ತಡರಾತ್ರಿ ನಡೆದಿದೆ. ನಗರದ ಬಿಬಿ ರಸ್ತೆಗೆ ಹೊಂದಿಕೊಂಡಂತಿರುವ ಕಂದವಾರ ರಸ್ತೆಯಲ್ಲಿನ ಶಾಸಕರ ಮನೆ ಮೇಲೆ ರಾತ್ರಿ ಸುಮಾರು 11.30ರ ಸಮಯದಲ್ಲಿ ಕಿಡಿಗೇಡಿಗಳು ಕಲ್ಲು ತೂರಿದಾಗ ಮನೆಯ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಕಳೆದ ಒಂದು ವರ್ಷದಿಂದ ಶಾಂತವಾಗಿದ್ದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ನಿನ್ನೆ ಲೋಕಸಭಾ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಶಾಸಕರು ಹಾಗೂ ನೂತನ ಸಂಸದರ ಬೆಂಬಲಿಗರ ಮಧ್ಯೆ ರಾಜಕೀಯ … Continue reading ಶಾಸಕ ಪ್ರದೀಪ್‌ ಈಶ್ವರ್‌ ಮನೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು