ಮನೆಮುಂದೆ ನಿಲ್ಲಿಸಿದ್ದ ಕಾರುಗಳ ಮೇಲೆ ಕಲ್ಲು ತೂರಿದ ಪುಂಡರು

Social Share

ಬೆಂಗಳೂರು,ಫೆ.24- ಬೈಕ್ ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಮನೆಮುಂದೆ ನಿಲ್ಲಿಸಿದ್ದ 6 ಕ್ಕೂ ಹೆಚ್ಚು ಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಹನುಮಂತನಗರ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.

ಮುಂಜಾನೆ 3 ಗಂಟೆ ಸುಮಾರಿನಲ್ಲಿ ಶ್ರೀನಿವಾಸನಗರದಲ್ಲಿ ನಡೆದ ಈ ಘಟನೆ ನಡೆದಿದ್ದು ಕಲ್ಲೇಟಿನಿಂದ ಕೆಲ ಕಾರುಗಳ ಗಜುಗಳು ಪುಡಿ ಪುಡಿಯಾಗಿದೆ. ಮದ್ಯದ ಮತ್ತಿನಲ್ಲಿ ಕಿಡಿಗೇಡಿಗಳು ಕಾರಿನ ಗ್ಲಾಸ್ ಗೆ ಕಲ್ಲುತೂರಿ ಪುಂಡಾಟ ನಡೆಸಿ ಪರಾರಿಯಾಗಿದ್ದಾರೆ.

ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ದೃಶ್ಯಗಳು ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಹನುಮಂತನಗರ ಪೊ ಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

#StonesAttack, #Bengaluru,

Articles You Might Like

Share This Article