ಓವೈಸಿ ಮನೆ ಮೇಲೆ ಕಲ್ಲು ತೂರಾಟ

Social Share

ನವದೆಹಲಿ,ಫೆ.20- ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ. ದೆಹಲಿಯಲ್ಲಿರುವ ಓವೈಸಿ ಅವರ ನಿವಾಸದ ಮೇಲೆ ಅಪರಿಚಿತ ದುಷ್ಕರ್ಮಿಗಳು ನಿನ್ನೆ ಸಂಜೆ ಕಲ್ಲು ತೂರಾಟ ನಡೆಸಿದ್ದಾರೆ.ಘಟನೆಯಲ್ಲಿ ಮನೆಯ ಕಿಟಕಿ ಗಾಜುಗಳು ಪುಡಿ ಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯ ಅಶೋಕ ರಸ್ತೆಯಲ್ಲಿರುವ ನಮ್ಮ ಮನೆ ಮೇಲೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಓವೈಸಿ ಅವರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಅಸುರರ ಪಟ್ಟಿಯೇ ಇದೆ : ಸಿಎಂ ಗರಂ

ಅವರ ದೂರಿನ ಆಧಾರದ ಮೇರೆಗೆ ಹೆಚ್ಚುವರಿ ಡಿಸಿಪಿ ನೇತೃತ್ವದ ಪೊಲೀಸ್ ತಂಡ ಓವೈಸಿ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲವು ಸಾಕ್ಷ್ಯ ಸಂಗ್ರಹ ಮಾಡಿದೆ.

ಜಾಲಿಮೂಡ್‍ನಲ್ಲಿ ರಾಹುಲ್, ಪ್ರಿಯಾಂಕಾ

ಇಂತಹ ದಾಳಿ ನಡೆದಿರುವುದು ಇದು ನಾಲ್ಕನೇ ಬಾರಿ, ನನ್ನ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಕಷ್ಟು ಸಿಸಿಟಿವಿ ಕ್ಯಾಮೆರಾಗಳನ್ನು ಹೊಂದಿದ್ದು, ಅದರ ಆಧಾರದ ಮೇಲೆ ತಪ್ಪಿತಸ್ಥರನ್ನು ತಕ್ಷಣವೇ ಬಂಧಿಸಬೇಕು ಎಂದು ಓವೈಸಿ ಆಗ್ರಹಿಸಿದ್ದಾರೆ.

Stones, pelted, Asaduddin Owaisi, residence, Delhi,

Articles You Might Like

Share This Article