ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿನ ಮೇಲೆ ಕಲ್ಲು ತೂರಾಟ

Social Share

ಮಾಲ್ಡಾ,ಜ.4- ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲೂ ತೂರಾಟ ನಡೆಸಿದ್ದಾರೆ. ಮಾಲ್ಡಾದಿಂದ ಸುಮಾರು 50 ಕಿಲೋ ಮೀಟರ್ ದೂರದಲ್ಲಿರುವ ಕುಮರ್ ಗಂಜ್ ರೈಲ್ವೆ ನಿಲ್ದಾಣದಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ. ವಂದೇ ಭಾರತ್ ಎಕ್ಸ್‍ಪ್ರೆಸ್ 22303 ರೈಲಿನ ಸಿ-13 ನಂಬರಿನ ಬೋಗಿಯ ಗಾಜುಗಳು ಹಾನಿಯಾಗಿವೆ ಎಂದು ರೈಲ್ವೆ ಅಕಾರಿಯೊಬ್ಬರು ತಿಳಿಸಿದ್ದಾರೆ.

ಈ ಘಟನೆ ನಡೆದ ನಂತರ ಮಾರ್ಗ ಮಧ್ಯದಲ್ಲಿ ರೈಲನ್ನು ನಿಲ್ಲಿಸಲಾಗಿದೆ ರೈಲ್ವೆ ಸುರಕ್ಷತಾ ಪಡೆಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಮಾಲ್ಡಾ ಟೌನ್ ಸರ್ಕಾರಿ ರೈಲ್ವೆ ಪೊಲೀಸ್ ಐಸಿ ಪ್ರಶಾಂತ್ ರೈ ತಿಳಿಸಿದ್ದಾರೆ.

ಶಾಸಕ ಅರವಿಂದ ಲಿಂಬಾವಳಿ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

ಉದ್ಘಾಟನಾ ಕಾರ್ಯಕ್ರಮದ ವೇಳೆ ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಇದೀಗ ಕಲ್ಲು ತೂರಾಟ ನಡೆಸುವ ಮೂಲಕ ಸೇಡು ತೀರಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ಬಂಗಾಳ ವಿಪಕ್ಷ ನಾಯಕ ಸುವೇದು ಅಧಿಕಾರಿ ಆರೋಪಿಸಿದ್ದು, ಈ ಘಟನೆ ಬಗ್ಗೆ ರಾಷ್ಟ್ರೀಯ ತನಿಖೆಯಿಂದ ತನಿಖೆ ನಡೆಸಬೇಕೆಂದು ಪ್ರಧಾನಿ ಕಾರ್ಯಾಲಯ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ.

Stones, pelted, Vande Bharat Express, West Bengal,

Articles You Might Like

Share This Article