ಕ್ರಿಶ್ಚಿಯನ್‍ಗೆ ಮತಾಂತರಗೊಳ್ಳುವವರ ಮೀಸಲಾತಿ ನಿಲ್ಲಿಸಿ : VHP

Social Share

ನವದೆಹಲಿ,ಅ.20- ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ಹಿಂದೂಗಳಿಗೆ ಮೀಸಲಾತಿಯ ಯೋಜನೆಯನ್ನು ನಿಲ್ಲಿಸುವಂತೆ ವಿಶ್ವ ಹಿಂದೂ ಪರಿಷತ್ ಸಂಘಟನೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಮತಾಂತರ ಮತ್ತು ಬಾಂಗ್ಲಾದೇಶೀಯರ ಅಕ್ರಮ ವಲಸೆಯಿಂದ ಜನಸಂಖ್ಯೆಯಲ್ಲಿ ಏರುಪೇರಾಗುತ್ತಿದೆ.ಮತಾಂತರ ನಿಷೇಧ ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.

ಪ್ರಯಾಗ್ರಾಜ್‍ನಲ್ಲಿ ನಡೆದ ನಾಲ್ಕು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಮಾರೋಪದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೇಶದ ವಿವಿಧೆಡೆ ಮತಾಂತರದ ಸಂಚು ನಡೆಯುತ್ತಿದೆ. ಈ ಕುರಿತು ಜಾಗೃತಿ ಮೂಡಿಸಲು ಸಂಘ ಪರಿವಾರವು ಸತತ ಪ್ರಯತ್ನ ಮಾಡುತ್ತಿದೆ ಎಂದರು.

ವಿಎಚ್ಪಿ ರಾಷ್ಟ್ರೀಯ ವಕ್ತಾರ ವಿಜಯ್ ಶಂಕರ್ ತಿವಾರಿ ಪ್ರಕಾರ, ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡವರು ಇನ್ನೂ ತಮ್ಮ ಹಿಂದೂ ಹೆಸರುಗಳು ಮತ್ತು ರುಜುವಾತುಗಳನ್ನು ದಾಖಲೆಗಳಲ್ಲಿ ಬಳಸುತ್ತಿದ್ದಾರೆ. ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳಿಗೆ (ಎಸ್ಟಿ) ನೀಡಿರುವ ಮೀಸಲಾತಿಯಿಂದ ಲಾಭ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದಂದು ಅಪ್ಪುಗೆ ಕರ್ನಾಟಕ ರತ್ನ ಪ್ರದಾನ

ಕೇಂದ್ರ ಸರ್ಕಾರವು ಎಸ್ಸಿ ಮತ್ತು ಎಸ್ಟಿ ಸಮುದಾಯದಿಂದ ಬಂದವರು ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾದಾಗ ಮೀಸಲಾತಿ ಪ್ರಯೋಜನಗಳನ್ನು ಪಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಯೋಜನೆಯನ್ನು ರೂಪಿಸಬೇಕು ಮತ್ತು ಸಮೀಕ್ಷೆ ಮಾಡಬೇಕು ಹೇಳಿದ್ದಾರೆ.

ಸಂಘ ಪರಿವಾರದ ಪರಿಶ್ರಮದಿಂದ ಮರಳಿ ಮಾತೃಧರ್ಮಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಘರ್ ವಾಪಸಿ ಅಭಿಯಾನವೂ ವೇಗ ಪಡೆದುಕೊಂಡಿದೆ. ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಗಳಿಗೆ ಮತಾಂತರಗೊಂಡವರನ್ನು ಮರಳಿ ಮಾತೃಧರ್ಮಕ್ಕೆ ಕರೆತರುವ ಅಭಿಯಾನವು ವೇಗ ಪಡೆದುಕೊಂಡಿದೆ ಎಂದು ತಿಳಿಸಿದರು.

ಮತಾಂತರಗಳನ್ನು ತಡೆಯಲೆಂದು ಜಾರಿಗೊಳಿಸಿರುವ ಕಾನೂನುಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಒತ್ತಾಯ, ಮದುವೆ ಮತ್ತು ಇತರ ಪ್ರಲೋಭನೆಗಳ ಮೂಲಕ ಮತಾಂತರ ಮಾಡುವುದನ್ನು ನಿರ್ಬಂಧಿಸುವ ಕಾನೂನುಗಳನ್ನು ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಜಾರಿಗೆ ತಂದಿವೆ ಎಂದು ಅವರು ನೆನಪಿಸಿಕೊಂಡರು.

ಯುಕೆ ಪ್ರಧಾನಿ ಲಿಜ್‍ಟ್ರಸ್ ಸರ್ಕಾರದ ಮತೊಬ್ಬ ಸಚಿವೆ ರಾಜೀನಾಮೆ

ಮತಾಂತರದಿಂದಾಗಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಅಕ್ರಮ ಒಳನುಸುಳುವಿಕೆಯು ಜನಸಂಖ್ಯೆಯ ಏರುಪೇರಾಗಲು ಇರುವ ಮತ್ತೊಂದು ಮುಖ್ಯ ಕಾರಣವಾಗಿವೆ. ಭಾರತವು 1947ರಲ್ಲಿ ತುಂಡಾಗಲು ಇದು ಮುಖ್ಯ ಕಾರಣವಾಗಿತ್ತು ಎಂದು ಹೊಸಬಾಳೆ ನೆನಪಿಸಿಕೊಂಡರು. ಉತ್ತರ ಬಿಹಾರದ ಪುರ್ನಿಯಾ ಮತ್ತು ಕಾತಿಹಾರ್ ಜಿಲ್ಲೆಗಳಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರಿಂದಾಗಿ ಜನಸಂಖ್ಯೆಯಲ್ಲಿ ಏರುಪೇರಾಗಿದೆ.

ಈ ಹಿನ್ನೆಲೆಯಲ್ಲಿ ವಲಸೆ ಮತ್ತು ಮತಾಂತರ ವಿಚಾರವನ್ನು ಸಮಗ್ರವಾಗಿ ಪರಿಶೀಲಿಸುವ ಅಗತ್ಯವನ್ನು ನಾನು ಒತ್ತಿ ಹೇಳುತ್ತಿದ್ದೇನೆ. ಇಡೀ ದೇಶಕ್ಕೆ ಅನ್ವಯಿಸುವಂತೆ ಏಕರೂಪದ ಜನಸಂಖ್ಯಾ ನೀತಿಯನ್ನು ಜಾರಿಗಳಿಸಬೇಕು ಎಂದು ಆಗ್ರಹಿಸಿದರು.

ಮತಾಂತರವಾಗಿ ಹಿಂದೂ ಧರ್ಮ ಬಿಟ್ಟು ಕ್ರಿಶ್ಚಿಯನ್ ಧರ್ಮಕ್ಕೆ ಹೋಗುವವರು ಪಡೆಯುತ್ತಿರುವ ಮೀಸಲಾತಿ ತೆಗೆಯುವಂತೆ ಮುಂದಿನ ದಿನಗಳಲ್ಲಿ ತಮ್ಮ ವಿಶ್ವ ಹಿಂದೂ ಪರಿಷತ್ ಸಂಘಟನೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಲಿದೆ. ಎಸ್ಸಿ ಮತ್ತು ಎಸ್ಟಿ ವರ್ಗದ ಜನರು ಕ್ರಿಶ್ಚಿಯನ್ ಧರ್ಮವನ್ನು ಅಳವಡಿಸಿಕೊಂಡಿದ್ದರೂ ಹೆಸರು ಮತ್ತು ಇತರ ರುಜುವಾತುಗಳನ್ನು ಬದಲಾಯಿಸದ ಅನೇಕ ಪ್ರಕರಣಗಳಿವೆ.

ಈ ದಾಖಲೆಗಳ ಆಧಾರದ ಮೇಲೆ ಅವರು ಮೀಸಲಾತಿ ಪಡೆಯುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು, ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ. ಸಾಮಾಜಿಕ ಚಟುವಟಿಕೆಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆಯೂ ಸಭೆಯು ಸುದೀರ್ಘ ಚರ್ಚೆ ನಡೆಸಿತು. ಮಹಿಳೆಯರು ಎಲ್ಲಾ ಕ್ಷೇತ್ರಗಳಿಗೂ ಪ್ರವೇಶಿಸುತ್ತಿದ್ದಾರೆ. ಪ್ರಮುಖ ಹುದ್ದೆಗಳಿಗೆ ಮಹಿಳೆಯರು ಬರುವಂತಾಗಲು ಪೂರಕ ವಾತಾವರಣ ನಿರ್ಮಿಸಬೇಕಿದೆ ಎಂದು ಅವರು ಹೇಳಿದರು.

Articles You Might Like

Share This Article