Sunday, April 28, 2024
Homeರಾಜ್ಯಪ್ರಣಾಳಿಕೆಯಲ್ಲಿ "ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ" ಎಂದ ಡಿಎಂಕೆ, ಡಿಕೆಶಿಯವರೇ ಈಗ ನಿಮ್ಮ ನಿಲುವೇನು..?

ಪ್ರಣಾಳಿಕೆಯಲ್ಲಿ “ಮೇಕೆದಾಟು ಯೋಜನೆ ಜಾರಿಗೆ ಬಿಡಲ್ಲ” ಎಂದ ಡಿಎಂಕೆ, ಡಿಕೆಶಿಯವರೇ ಈಗ ನಿಮ್ಮ ನಿಲುವೇನು..?

ಬೆಂಗಳೂರು,ಮಾ.21- ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಇಂಡಿ ಮೈತ್ರಿ ಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದಕ್ಕೆ ಕಾಂಗ್ರೆಸ್‍ನ ನಿಲುವು ಏನು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಮೈತ್ರಿ ಪಕ್ಷವಾದ ಇಂಡಿ, ಯಾವುದೇ ಕಾರಣಕ್ಕೂ ಮೇಕೆದಾಟು ಯೋಜನೆಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಈಗ ನಮ್ಮ ನೀರು, ನಮ್ಮ ಹಕ್ಕು ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News