Saturday, August 9, 2025
Homeರಾಜ್ಯಸಹಪಾಠಿಗಳ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಸಹಪಾಠಿಗಳ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

Student commits suicide after being harassed by classmates

ಬೆಂಗಳೂರು,ಆ.9– ಕಾಲೇಜು ಸಹಪಾಠಿಗಳ ಕಿರುಕುಳದಿಂದ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗುಳೇದಗುಡ್ಡ ಪಟ್ಟಣದ ನಿವಾಸಿ ಅಂಜಲಿ ಮುಂಡಾಸ್‌‍ (21) ಆತಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಖಾಸಗಿ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದ ಅಂಜಲಿ ಅವರಿಗೆ ಸಹಪಾಠಿ ಯುವಕ ಹಾಗೂ ಯುವತಿ ಸೇರಿದಂತೆ ಮೂವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ.

ನಿನ್ನೆ ಎಂದಿನಂತೆ ಕಾಲೇಜಿಗೆ ಅಂಜಲಿ ಹೋಗಿದ್ದಾಗ ಸಹಪಾಠಿಗಳು ಮಾನಸಿಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದಿದ್ದ ಅಂಜಲಿ ಮನೆಗೆ ಬಂದು ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಕಿರುಕುಳ ನೀಡಿದವರ ಹೆಸರುಗಳು ಹಾಗೂ ಅವರುಗಳ ಮೊಬೈಲ್‌ ನಂಬರ್‌ಗಳನ್ನು ಬರೆದು ಇವರುಗಳನ್ನು ಸುಮನೆ ಬಿಡಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.ಸುದ್ದಿ ತಿಳಿದು ಗುಳೇದಗುಡ್ಡ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ, ಸ್ಥಳದಲ್ಲಿ ದೊರೆತ ಡೆತ್‌ನೋಟ್‌ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News