Friday, May 24, 2024
Homeರಾಷ್ಟ್ರೀಯಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜ್ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಹೈದರಾಬಾದ್, ಮಾ.9- ತೆಲಂಗಾಣದಲ್ಲಿ 17 ವರ್ಷದ ಬಾಲಕಿ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಟ್ಟಡದಿಂದ ಜಿಗಿದು ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಸಾಹಿತಿ ಎಂದು ಗುರುತಿಸಲಾಗಿದೆ. ತೆಲಂಗಾಣದ ಹನಮಕೊಂಡದಲ್ಲಿ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ತನ್ನ ಕಾಲೇಜು ಕಟ್ಟಡದಿಂದ ಜಿಗಿದು ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ ಮತ್ತು ಅದರ ಬಗ್ಗೆ ಯಾವುದೇ ದೂರುಗಳು ದಾಖಲಾಗಿಲ್ಲ ಎಂದು ಅ„ಕಾರಿಗಳು ತಿಳಿಸಿದ್ದಾರೆ. ಭೀಮಾರಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹಾಸ್ಟೆಲ್‍ನಲ್ಲಿ ವಾಸಿಸುತ್ತಿದ್ದರು.

ಕಾಲೇಜು ಆಡಳಿತ ಮಂಡಳಿ ಇಂದು ಬೆಳಗ್ಗೆ ಆಕೆಯ ಶವವನ್ನು ಪತ್ತೆ ಮಾಡಿದೆ ಎಂದು ಹನಮಕೊಂಡ ಪೊಲೀಸ್ ಇನ್ಸ್‍ಪೆಕ್ಟರ್ ಸಂಜೀವ್ ಹೇಳಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು, ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಬಾಲಕಿ ಕಟ್ಟಡದಿಂದ ಜಿಗಿದ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ಹೇಳಿದರು.

RELATED ARTICLES

Latest News