ಗಾಜಿಯಾಬಾದ್,ಜು.19- ಇಬ್ಬರು ಪುಢಾರಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಸತತ ಹನ್ನೆರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಅಪಹೃತ ವಿದ್ಯಾರ್ಥಿನಿಯ ಮೇಲೆ ಮೀರತ್ ಹಾಗೂ ಜಮುವಿನ ಹೋಟೆಲ್‌ನಲ್ಲಿ ಅತ್ಯಾಚಾರ ನಡೆಸಿ ಆಕೆಯ ಅಶ್ಲೀಲ ವಿಡಿಯೋವನ್ನು ಕೂಡ ಮಾಡಿದ್ದಾರೆ ಎನ್ನಲಾಗಿದೆ.
ಇದಾದ ಬಳಿಕ ಆಕೆಗೆ ಬೆದರಿಕೆ ಹಾಕಿದ್ದಾರೆ. ಜುಲೈ 6 ರಂದು ಗಾಜಿಯಾಬಾದ್‌ನ ಭೋಜ್‌ಪುರ್ ಪೊಲೀಸ್ ಠಾಣೆ ಬಳಿ ಬಿಟ್ಟು ಪರಾರಿಯಾಗಿದ್ದಾರೆ.ಗಾಜಿಯಾಬಾದ್ ಹಾಗೂ ಮೀರತ್ ಪೊಲೀಸರು ತಮ ವ್ಯಾಪ್ತಿಗೆ ಬರುವುದಿಲ್ಲ ಎಂದು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಕುಟುಂಬದವರು ಎಸ್‌ಎಸ್‌ಪಿಗೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಗಿದೆ.
ಮೋದಿನಗರ ಗ್ರಾಮದ ನಿವಾಸಿಯಾಗಿರುವ ಬಾಲಕಿ ಇಲ್ಲಿನ ಕಾಲೇಜೊಂದರಲ್ಲಿ ಓದುತ್ತಿದ್ದಳು. ಜೂನ್ 24ರಂದು ಕಾಲೇಜಿಗೆ ಹೋದವಳು ನಾಪತ್ತೆಯಾಗಿದ್ದಳು. ಕುಟುಂಬದವರು ಹುಡುಕಾಟ ನಡೆಸಿ, ನಾಪತ್ತೆ ಪ್ರಕರಣವನ್ನೂ ದಾಖಲಿಸಿದ್ದರು.
ಇದೀಗ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ, ಜೂನ್ 24ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ತನ್ನನ್ನು ಇಬ್ಬರು ಅಪಹರಿಸಿದ್ದರು ಎಂದು ಆಕೆ ತಿಳಿಸಿದ್ದಾಳೆ. ದೂರಿನ ಆಧಾರದ ಮೇಲೆ ಇದೀಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ, ವಿದ್ಯಾರ್ಥಿನಿಯನ್ನು ಇರಿಸಿದ್ದ ಹೋಟೆಲ್‌ನ ಸಿಸಿಟಿವಿ ದಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ.
ಇಬ್ಬರೂ ಆರೋಪಿಗಳು ವಿದ್ಯಾರ್ಥಿನಿಯನ್ನು ಜಮುವಿಗೆ ಕರೆದೊಯ್ದು ಆರು ದಿನಗಳ ಕಾಲ ಅಲ್ಲಿನ ಹೋಟೆಲ್‌ನಲ್ಲಿ ಒತ್ತೆಯಾಳಾಗಿ ಇರಿಸಿದ್ದರು. ಇಲ್ಲಿ ನಾಲ್ವರು ಯುವಕರು ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ವಿದ್ಯಾರ್ಥಿನಿ ಆರೋಪಿಸಿದ್ದಾಳೆ.