Friday, April 4, 2025
Homeಜಿಲ್ಲಾ ಸುದ್ದಿಗಳು | District Newsದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದ ವಿದ್ಯಾರ್ಥಿನಿ ಬೆಂಕಿ ತಗುಲಿ ಸಾವು

ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದ ವಿದ್ಯಾರ್ಥಿನಿ ಬೆಂಕಿ ತಗುಲಿ ಸಾವು

ತುಮಕೂರು,ಮಾ.20- ಶಾಲೆಯ ಸಮೀಪದ ದೇವಾಲಯವೊಂದರಲ್ಲಿ ದೀಪ ಹಚ್ಚಲು ಹೋಗಿ ಬೆಂಕಿ ತಗುಲಿ ಗಾಯಗೊಂಡಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಶಿರಾ ತಾಲ್ಲೂಕಿನ ಮೇಳಕೋಟೆ ಗ್ರಾಮದಲ್ಲಿ ನಡೆದಿದೆ. ದೀಕ್ಷಾ(6) ಮೃತಪಟ್ಟ ವಿದ್ಯಾರ್ಥಿನಿ.

ಕಳೆದ ಮಾ.13ರಂದು ಮಧ್ಯಾಹ್ನದ ಊಟದ ವಿರಾಮದ ಸಂದರ್ಭದಲ್ಲಿ ಶಾಲೆಯ ಸಮೀಪವೇ ಇರುವ ದೇವಾಲಯಕ್ಕೆ ಹೋಗಿ ದೀಪ ಹಚ್ಚುತ್ತಿದ್ದ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ದೀಕ್ಷಾ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂಧನ ಮುಗಿಲು ಮುಟ್ಟಿತ್ತು. ಶಾಲೆಗೆ ಬಂದ ಮೇಲೆ ವಿದ್ಯಾರ್ಥಿಗಳ ಜವಾಬ್ದಾರಿ ಶಿಕ್ಷಕರದ್ದಾಗಿರುತ್ತದೆ. ಆದರೆ ಶಾಲೆಯಿಂದ ಹೊರಹೋಗಲು ಏಕೆ ಬಿಟ್ಟಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News